2nd PUC Result: ನಾಳೆ (ಏಪ್ರಿಲ್ 03) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು, ಏಪ್ರಿಲ್.02: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ (2nd PUC Result) ಏಪ್ರಿಲ್ 03 ರ ಬುಧವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.
ಮಾರ್ಚ್ 2023 ದ್ವಿತೀಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 01 ರಿಂದ ಮಾರ್ಚ್ 23ರ ವರೆಗೂ ನಡೆಸಲಾಗಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಈ ರಾಜ್ಯದ 1,124 ಕೇಂದ್ರಗಳಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು.

ಫಲಿತಾಂಶ ಪ್ರಕಟವಾಗುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಹೇಳಿಕೆ ಬಿಡುಗಡೆ ಮಾಡಿದೆ. "ಮಾರ್ಚ್ 2023ರ ದ್ವಿತೀಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು 01/03/2024 ರಿಂದ 23/03/2024 ನಡೆಸಲಾಗಿತ್ತು. ಎಲ್ಲಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 03/04/2024 ರಂದು ಬೆಳಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 03/04/2024ರ ಬೆಳಗ್ಗೆ 11:00 ಗಂಟೆಯ ವೀಕ್ಷಿಸಬಹುದಾಗಿದೆ" ಎಂದು ತಿಳಿಸಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ನೋಡುವುದು ಹೇಗೆ?
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಲಾದ ರಿಜಿಸ್ಟರ್ ನಂಬರ್ / ರೋಲ್ ನಂಬರ್ (ನೋಂದಣಿ ಸಂಖ್ಯೆ) ಅನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (KSEAB) ನೀಡುವ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು.












Click it and Unblock the Notifications