ಸಿಇಟಿ ಫಲಿತಾಂಶಕ್ಕೂ ಮೊದಲು ಪಿಯು ಫಲಿತಾಂಶ ಪ್ರಕಟ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 27 : 'ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ. ಸಿಇಟಿ ಫಲಿತಾಂಶಕ್ಕೂ ಮೊದಲೇ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಹೇಳಿದರು.

ಬುಧವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಯಾವಾಗ ಬರುತ್ತದೆ? ಎಂಬ ಗೊಂದಲ ಬೇಡ. ಸಿಇಟಿ ಪರೀಕ್ಷೆ ಫಲಿತಾಂಶ ಬರುವ ಮೊದಲೇ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ' ಎಂದು ತಿಳಿಸಿದರು. ['ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಳಂಬ']

kimmane rathnakar

'ಪದವಿ ಪೂರ್ವ ಶಿಕ್ಷಣ ಮಂಡಳಿಯಲ್ಲಿನ ಆಡಳಿತ ಶಾಖೆ ಹಾಗೂ ಪರೀಕ್ಷಾ ವಿಭಾಗಗಳನ್ನು ಪ್ರತ್ಯೇಕಗೊಳಿಸುವ ಚಿಂತನೆ ನಡೆದಿದ್ದು, ಈ ಬಗ್ಗೆ ಇಲಾಖಾ ಮುಖ್ಯಸ್ಥರಿಗೆ ವರದಿ ನೀಡುವಂತೆ ಕೋರಲಾಗಿದೆ. ವರದಿ ಬಂದ ಬಳಿಕ ಚರ್ಚೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ' ಎಂದರು. [ಏನು ಓದ್ಕೋಬೇಡಿ, ಪಾಸಾಗ್ತೀರಾ ಹೋಗಿ ಎಂದಿದ್ದ ಕಾಲೇಜು!]

17 ಸಾವಿರ ಶಿಕ್ಷಕರ ನೇಮಕ : 'ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 12, 200 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಮುಂದಿನ ಶೈಕ್ಷಣಿಕ ವರ್ಷದಲ್ಲಿ 17 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು. ಈ ಸಂಬಂಧ ಇಲಾಖೆ ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ' ಎಂದು ತಿಳಿಸಿದರು. [ಪ್ರಶ್ನೆ ಪತ್ರಿಕೆ ಹಗರಣದಲ್ಲಿ ಕೋಕಾ ಪ್ರಯೋಗ, ಏನಿದು ಕೋಕಾ?]

ಮಂಡಳಿಯಲ್ಲಿ ಪತ್ರಿಕೆ ಸೋರಿಕೆಯಾಗಿಲ್ಲ : 'ಪಿಯುಸಿ ರಸಾಯನಶಾಸ್ತ್ರ ಪರೀಕ್ಷೆ ಪ್ರಶ್ನೆ ಪತ್ರಿಕೆ ಪದವಿ ಪೂರ್ವ ಶಿಕ್ಷಣ ಮಂಡಳಿಯಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ' ಎಂದು ಸ್ಪಷ್ಟಪಡಿಸಿದ ಸಚಿವರು, 'ಈ ವಿಷಯ ತನಿಖಾ ಹಂತದಲಿದ್ದು ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದರು.

ಇನ್ನೂ ತೀರ್ಮಾನ ಕೈಗೊಂಡಿಲ್ಲ : 'ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯೇತರ ಪ್ರಶ್ನೆಗಳು ಇವೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ' ಎಂದು ಹೇಳಿದ ಕಿಮ್ಮನೆ ರತ್ನಾಕರ್ ಅವರು, 'ಮುಖ್ಯ ಮೌಲ್ಯಮಾಪಕರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ವೇಳೆ ಪಠ್ಯೇತರ ಪ್ರಶ್ನೆಗಳು ಇದ್ದಲ್ಲಿ ಗ್ರೇಸ್‌ಮಾರ್ಕ್ಸ್ ನೀಡಬೇಕೆ?, ಬೇಡವೆ? ಎಂದು ತೀರ್ಮಾನಿಸಲಾಗುವುದು' ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Primary and Secondary Education Minister Kimmane Rathnakar said that, 2nd PUC result will be announced before CET result.
Please Wait while comments are loading...