2nd PUC Result : ಇಂದು ಬೆಳಿಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಆನ್ಲೈನ್ನಲ್ಲಿ ಫಲಿತಾಂಶ ನೋಡುವುದು ಹೇಗೆ?
ಬೆಂಗಳೂರು ಏಪ್ರಿಲ್ 21: 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ರಾಜ್ಯದಲ್ಲಿ 2022-23ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮಾರ್ಚ್ 09,2023 ರಿಂದ ಪರೀಕ್ಷೆಗಳು ಆರಂಭವಾಗಿ ಮಾರ್ಚ್ 29,2023ಕ್ಕೆ ಮುಕ್ತಾಯಗೊಂಡಿದೆ. 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ (second PUC examination) ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳು ಇಂದು ಫಲಿತಾಂಶ ಪಡೆಯಲಿದ್ದಾರೆ.
ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಾಜ್ಯಾದ್ಯಂತ ಸುಮಾರು 7,26,195 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ ಸುಮಾರು 1,109 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳಲ್ಲಿ ಪರೀಕ್ಷೆ ನಡೆದಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆಯು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 ದಿನಾಂಕ ಮತ್ತು ಸಮಯವನ್ನು ಪ್ರಕಟಿಸಿದ್ದು, ಇಂದು (ಏಪ್ರಿಲ್ 21) ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಪ್ರಕಟಿಸಲಿದೆ.

ಇನ್ನು 11 ಗಂಟೆಗೆ ಆನ್ಲೈನ್ನಲ್ಲಿ ಫಲಿತಾಂಶ ದೊರೆಯುತ್ತದೆ. ಫಲಿತಾಂಶ ಅಧಿಕೃತ ವೆಬ್‌ಸೈಟ್ karresults.nic ನಲ್ಲಿ ನೋಡಬಹುದಾಗಿ ಹಾಗಾದ್ರೆ, ಆನ್ಲೈನ್ನಲ್ಲಿ ಫಲಿತಾಂಶ ನೋಡುವುದೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಈ ಕೆಳಗೆ ನೀಡಲಾಗಿರುವ ಮಾಹಿತಿಯನ್ನು ಅನುಸರಿ ನೋಡಬಹುದು. ಹಾಗೇ ಸ್ಕೋರ್ ಕಾರ್ಡ್ ಡೌನ್‌ಲೌಡ್ ಮಾಡಿಕೊಳ್ಳಬಹುದು.
Second PU results will be announced on Friday, 10am onwards. Results will be available at https://t.co/xDi4adGZI9 from 11 am. #SECONDPU
— Kevin Mendonsa (@KevinMTOI) April 20, 2023
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ?
*ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಗೆ ಭೇಟಿ ನೀಡಬೇಕು.
*ಓಪನ್ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
*ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.
*ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ.
*ನಂತರ 'Submit' ಎಂಬಲ್ಲಿ ಕ್ಲಿಕ್ ಮಾಡಿ.
*ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.

*ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದ ನಂತರ ಅಂಕಗಳ ಮರು ಮೌಲ್ಯಮಾಪನ
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ನಂತರ ಮರುಪರಿಶೀಲಿಸಲು ಬಯಸುವವರು ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಗೆ ಭೇಟಿ ನೀಡಬಹುದು ಮತ್ತು ಲಿಂಕ್ ಸಕ್ರಿಯವಾದ ನಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ, ವಿದ್ಯಾರ್ಥಿಗಳು ಕರ್ನಾಟಕ ಮಂಡಳಿಯ ಅಧಿಕೃತ ವೆಬ್‌ಸೈಟ್ https://kseab.karnataka.gov.in/ ಗೆ ಅನ್ನು ಪರಿಶೀಲಿಸಲು ಸೂಚಿಸಲಾಗಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಬಾರಿಯ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಗಳನ್ನು ನೀಡಲಾಗಿತ್ತು. ರಸಾಯನಶಾಸ್ತ್ರ ಪರೀಕ್ಷೆ ಸಿಬಿಎಸ್‌ಸಿ, ಐಸಿಎಸ್‌ಸಿ ಮಾದರಿಯಲ್ಲಿ ಇತ್ತು ಎಂಬ ದೂರುಗಳು ಕೇಳಿಬಂದಿತ್ತು. ಈ ಕುರಿತು ಕೆಲವರು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಗೆ ದೂರು ಸಲ್ಲಿಸಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆಯನ್ನ ಈ ಬಾರಿ ಎಂದಿಗಿಂತ ಕಟ್ಟುನಿಟ್ಟಾಗಿ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಬಳಕೆ ಸಂಪೂರ್ಣ ನಿಷೇಧಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ಬಳಿ, ಸಿಸಿ ಕ್ಯಾಮೆರಾ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ ಭಾರಿ ಭದ್ರತೆ ಕಲ್ಪಿಸಲಾಗಿತ್ತು.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ











Click it and Unblock the Notifications