ಪಿಯುಸಿ ಪರೀಕ್ಷೆಯಲ್ಲೇ ಫೇಲ್ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು!
ಬೆಂಗಳೂರು, ಜೂ. 19: ಓದಿನ ಪಾಠಕ್ಕಿಂತಲೂ ಬದುಕಿನ ಪಾಠ ದೊಡ್ಡದು. ಉಸಿರು ಇದ್ದರೆ ಓದು. ಉಸಿರೇ ಇಲ್ಲದ ಮೇಲೆ ಯಾವ ಅಂಕ, ಪದವಿ, ಡಿಗ್ರಿ ಪ್ರಯೋಜನಕ್ಕೆ ಬರುತ್ತೆ? ಇಂಥದ್ದೊಂದು ಸಣ್ಣ ಆಲೋಚನೆ ಮೂಡಿದ್ದರೆ ಎಂಟು ವಿದ್ಯಾರ್ಥಿಗಳ ಬದುಕು ಅಂತ್ಯವಾಗುತ್ತಿರಲಿಲ್ಲ! ಆದ್ರೆ ಓದಿನ ಪಾಠ ಕಲಿತಿದ್ದ ಅವರು ಬದುಕಿನ ಪಾಠವನ್ನೇ ಮರೆತಿದ್ದರು!
ದ್ವಿತೀಯ ಪಿಯಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ, ನಪಾಸು ಆದ ಕಾರಣಕ್ಕೆ ರಾಜ್ಯದಲ್ಲಿ ಎಂಟು ವಿದ್ಯಾರ್ಥಿಗಳು ತಮ್ಮ ಬದುಕನ್ನು ಅಂತ್ಯಗೊಳಿಸಿದ್ದಾರೆ. ಅದರಲ್ಲಿ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೀದರ್ ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು:
ಬೀದರ್‌ನ ಚಿಟಗುಪ್ಪ ತಾಲೂಕಿನ ಮದ್ದರಗಿ ಗ್ರಾಮದ ಸುಹಾಲಿಸಿ ದಿಲೀಪ ಮರ್ಜಾಪುರೆ ಎಂಬ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆದ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಂಡ್ಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಬಲಿ:
ಪಿಯುಸಿಯಲ್ಲಿ ಫೇಲಾದ ಕಾರಣಕ್ಕೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ. ಇಲ್ಲಿನ ಮಹದೇವಪುರದ ಎಂ.ಜೆ. ಸ್ಪಂದನಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ :
ಇನ್ನು ಬಾಗಲಕೋಟೆ ಜಿಲ್ಲೆ, ಬೀಳಗಿ ತಾಲೂಕಿನ ಹಡಹಳ್ಳಿ ಗ್ರಾಮದ ಪೂಜಾ ರಾಚಪ್ಪ ಎಂಬ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಪಾಸು ಆದ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಈ ಕೆಟ್ಟ ತೀರ್ಮಾನ ತೆಗೆದುಕೊಂಡು ಜೀವನವನ್ನೇ ಅಂತ್ಯ ಮಾಡಿಕೊಂಡಿದ್ದಾಳೆ.
ಪ್ರಥಮ ದರ್ಜೆಯಲ್ಲಿ ಪಾಸಾದ್ರೂ ಆತ್ಮಹತ್ಯೆ:
ಕಡಿಮೆ ಅಂಕ ಬಂತು ಎಂಬ ಕಾರಣಕ್ಕೆ ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಬಸವನಹಳ್ಳಿ ನಿವಾಸಿ ಸಂಧ್ಯಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೇರೂರು ನಿವಾಸಿ ನಿವೃತ್ತ ಯೋಧ ಸುಭಾಷ್ ಅವರ ಪುತ್ರಿಯಾಗಿರುವ ಸಂಧ್ಯಾ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ಅಭ್ಯಾಸ ಮಾಡಿದ್ದರು. ವಿಜ್ಞಾನ ವಿಭಾಗದಲ್ಲಿ 404 ಅಂಕ ಗಳಿಸಿದ್ದಳು. ಕಡಿಮೆ ಅಂಕ ಬಂತು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಪ್ರಣವ್ ಈಶ್ವರ ನಾಯ್ಕ್ ಜೀವ ಅಂತ್ಯ:
ಇನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಗ್ರಾ. ಪಂ. ವ್ಯಾಪ್ತಿಯ ನಿವಾಸಿ ಪ್ರಣವ್ ಈಶ್ವರ ನಾಯಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ.
ಗದಗದಲ್ಲೂ ನೇಣಿಗೆ ಶರಣಾದ ಪವಿತ್ರಾ ಪ್ರಭುಗೌಡ:
ಗದಗ ತಾಲೂಕಿನ ಹರ್ತಿ ಗ್ರಾಂದ ಪವಿತ್ರ ಪ್ರಭುಗೌಡ ಲಿಂಗದಾಳ ಎಂಬ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಪಾಸು ಆಗಿದ್ದ ಪವಿತ್ರಾ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಬದುಕನ್ನೇ ಅಂತ್ಯಗೊಳಿಸಿದ್ದಾಳೆ.
ಗಣಿತದಲ್ಲಿ ಫೇಲಾಗಿದ್ದದ್ದಕ್ಕೆ ವಿಜಯನಗರದ ವಿದ್ಯಾರ್ಥಿ ಆತ್ಮಹತ್ಯೆ:
ಗಣಿತದಲ್ಲಿ ನಪಾಸು ಆಗಿದ್ದ ವಿಜಯನಗರ ಇಲ್ಲೆ ಹೊಸಪೇಟೆ ತಾಲೂಕಿನ ಗರಗ ಗ್ರಾಮದ ಶ್ಯಾಮರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಲ್ಲಿನ ಸಂಡೂರಿನ ಖಾಸಗಿ ಕಾಲೇಜಿನಲ್ಲಿ ವಿಜ್ಞಾನ ವಿಷಯದಲ್ಲಿ ಪಿಯುಸಿ ಪರೀಕ್ಷೆ ಬರೆದಿದ್ದ. ಎಲ್ಲಾ ವಿಷಯದಲ್ಲಿ ಪಾಸಾಗಿರುವ ಶ್ಯಾಮರಾಜ್ ಗಣಿತದಲ್ಲಿ ಫೇಲ್ ಆಗಿದ್ದ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೈಲಿಗೆ ತಲೆಕೊಟ್ಟು ಬಳ್ಳಾರಿ ವಿದ್ಯಾರ್ಥಿ ಸಾವು:
ಇನ್ನು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಪಾಸು ಆಗಿದ ಕಾರಣಕ್ಕೆ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪವನ್ ಸಾಯಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಅಂತೂ ರಾಜ್ಯದಲ್ಲಿ ಫಲಿತಾಂಶ ಬಂದ ದಿನವೇ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ಶಿಕ್ಷಣ ರಂಗವನ್ನೇ ದಿಗ್ರ್ಬಾಂತಗೊಳಿಸಿದೆ. ಬದುಕಿಗಿಂತಲೂ ದೊಡ್ಡದು ಯಾವುದೂ ಅಲ್ಲ ಎಂಬ ಸತ್ಯವನ್ನು ಅರಿಯಮ ಮುಗ್ಧ ಮಕ್ಕಳು ಬದುಕನ್ನೇ ಅಂತ್ಯ ಮಾಡಿಕೊಂಡಿದ್ದಾರೆ.
ಮಾಜಿ ಸಿಎಂ ಎಚ್‌ಡಿಕೆ ಕಿವಿಮಾತು:
"ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಗಳಿಸಿಲ್ಲ ಎಂಬ ಕಾರಣಕ್ಕೆ ಅಥವಾ ಫೇಲಾದವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ನನಗೆ ಆಘಾತ ಉಂಟು ಮಾಡಿದೆ. ಅಂಕವೇ ಎಲ್ಲವೂ ಅಲ್ಲ. ಪಾಸು ಫೇಲು ಸಾಮಾನ್ಯ. ಜೀವನದಲ್ಲಿ ಏಳು - ಬೀಳು ಇದ್ದೇ ಇರುತ್ತದೆ. ಕಡಿಮೆ ಅಂಕ ಬಂದವರು ಮುಂದಿನ ತರಗತಿಯಲ್ಲಿ ಹೆಚ್ಚಿನ ಅಂಕ ಪಡೆಯಲು ಯತ್ನಿಸಬೇಕು. ಫೇಲಾದವರು ಪಾಸಾಗಲು ಶ್ರಮಿಸಬೇಕು. ಅದನ್ನು ಬಿಟ್ಟು ಅಂಕಕ್ಕಾಗಿ ಜೀವನ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡಿದ ಅನ್ಯಾಯ," ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.
ಅಂಕವೇ ಎಲ್ಲವೂ ಅಲ್ಲ. ಪಾಸು-ಫೇಲು ಸಾಮಾನ್ಯ, ಜೀವನದಲ್ಲೂ ಏಳುಬೀಳು ಇದ್ದೇ ಇರುತ್ತದೆ. ಕಡಿಮೆ ಅಂಕ ಬಂದವರು ಮುಂದಿನ ತರಗತಿಯಲ್ಲಿ ಉತ್ತಮ ಅಂಕ ಪಡೆಯಲು ಯತ್ನಿಸಬೇಕು. ಫೇಲಾದವರು ಪಾಸಾಗಲು ಶ್ರಮಿಸಬೇಕು. ಅದನ್ನು ಬಿಟ್ಟು ಅಂಕಕ್ಕಾಗಿ ಜೀವವನ್ನೇ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡುವ ಅನ್ಯಾಯ. 2/4
— H D Kumaraswamy (@hd_kumaraswamy) June 19, 2022
"ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರೀಕ್ಷಾ ಹಂತಗಳು ಇರುವಂತೆಯೇ ಬದುಕಿನ ಉದ್ದಕ್ಕೂ ಅಗ್ನಿ ಪರೀಕ್ಷೆಗಳು ಇರುತ್ತವೆ. ಅವನ್ನು ಧೈರ್ಯ, ಛಲದಿಂದ ಎದರಿಸಬೇಕು ಎಂಬುದನ್ನು ಪೋಷಕರು, ಬೋಧಕರು, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಡಬೇಕು. ವಿದ್ಯಾಭ್ಯಾಸದಲ್ಲಿ ಹಿಂದುಳಿದ ಅನೇಕರು ಇವತ್ತು ಉನ್ನತ ಸ್ಥಾನ ಗಳಿಸಿದ್ದಾರೆ. ಯಾರೂ ಧೃತಿಗೆಡಬಾರದು. ಪೋಷಕರು ಮಕ್ಕಳಲ್ಲಿ ಆತ್ಮಸ್ತೈರ್ಯ ತುಂಬಬೇಕು. ಸೂಕ್ಷ್ಮ ಮನಸ್ಸಿನ ಮಕ್ಕಳನ್ನು ಅಕ್ಕರೆಯಿಂದ ಕಾಣಬೇಕು," ಎಂದು ಅವರು ಟ್ವೀಟ್ ಮಾಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸುದ್ದಿ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. 1/4 pic.twitter.com/w6yWPP2X6q
— H D Kumaraswamy (@hd_kumaraswamy) June 19, 2022
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications