ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಎಸ್ಎಲ್‌ಸಿ, ಪಿಯುಸಿ ಫಲಿತಾಂಶ ದಿನಾಂಕ ಹೇಳಿದ ಶಿಕ್ಷಣ ಸಚಿವ

|
Google Oneindia Kannada News

ಚಿಕ್ಕಬಳ್ಳಾಪುರ, ಜೂನ್ 29: ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ಮುಗಿದಿದೆ. ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಈ ನಡುವೆ ಪಿಯುಸಿ ಮತ್ತು ಎಸ್ಎಸ್ಎಲ್ ಸಿ ಫಲಿತಾಂಶ ಯಾವಾಗ ಎಂಬ ಮಾಹಿತಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡಿದ್ದಾರೆ.

Recommended Video

Congree Cycle Rally against Fuel hike : ಸೈಕಲ್ ಏರಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು|Oneindia Kannada

ಜುಲೈ ಅಂತ್ಯಕ್ಕೆ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಲಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಪರೀಕ್ಷಾ ಕೇಂದ್ರದಿಂದ ಕೊರೊನಾ: ಸುರೇಶ್ ಕುಮಾರ್ ಸ್ಪಷ್ಟನೆಪರೀಕ್ಷಾ ಕೇಂದ್ರದಿಂದ ಕೊರೊನಾ: ಸುರೇಶ್ ಕುಮಾರ್ ಸ್ಪಷ್ಟನೆ

ಚಿಕ್ಕಬಳ್ಳಾಪುರದಲ್ಲಿಂದು ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಿಕ್ಷಣ ಸಚಿವರು, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ''ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ವರ್ಷದ ಹಾಜರಾತಿಯಲ್ಲಿ ದೊಡ್ಡ ವ್ಯತ್ಯಾಸವೇನು ಕಾಣುತ್ತಿಲ್ಲ. ಮಕ್ಕಳು ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ'' ಎಂದು ತಿಳಿಸಿದರು.

Karnataka 2nd Puc Result In July Last Week; Sslc Result In August First Week

ಇನ್ನು ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚು ವಸೂಲಿ ಮಾಡುತ್ತಿದ್ದಾರೆ ಎಂಬ ವಿಷಯಕ್ಕೆ ಪ್ರತಿಕ್ರಿಯಿಸಿದ ಸುರೇಶ್ ಕುಮಾರ್ ''ಖಾಸಗಿ ಶಾಲೆಗಳು ಶುಲ್ಕ ಹೆಚ್ಚಿಸಬಾರದು ಎಂದು ನಿರ್ದೇಶನ ನೀಡಿದ್ದೇವೆ. ಒಂದು ವೇಳೆ ಅಂತಹ ಘಟನೆಗಳು ಗಮನಕ್ಕೆ ಬಂದರೆ ಅವರ ಮೇಲೆ ಕ್ರಮ ಜರುಗಿಸಲಾಗುವುದು'' ಎಂದು ತಿಳಿಸಿದ್ದಾರೆ.

ಇನ್ನು ಶಾಲಾ ಪ್ರಾರಂಭದ ಬಗ್ಗೆ ಸರ್ಕಾರ ಇನ್ನೂ ನಿರ್ಣಯ ಕೈಗೊಂಡಿಲ್ಲ. ಆನ್‌ಲೈನ್ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ತಜ್ಞರ ಸಮಿತಿ ವರದಿ ಸಲ್ಲಿಸಿದ ಬಳಿಕ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

English summary
Karnataka 2nd PUC Result in July Last Week and SSLC Result in August First Week said education minister Suresh Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X