ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂ 25 ರೊಳಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ!

|
Google Oneindia Kannada News

ಬೆಂಗಳೂರು, ಜೂ. 12: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಒಂದು ತಿಂಗಳು ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೂನ್ 20 ರಿಂದ 25ರೊಳಗೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ಉನ್ನತ ಮೂಲಗಳು ಖಚಿತಪಡಿಸಿವೆ.

ಮೇ. 18 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಕರ್ನಾಟಕದಲ್ಲಿ ಮುಗಿದಿದ್ದವು. ಪರೀಕ್ಷೆ ಮುಗಿದ ಕೂಡಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮೌಲ್ಯಮಾಪನಕ್ಕೆ ಚಾಲನೆ ನೀಡಲಾಯಿತು. ನೋಂದಣಿ ಮಾಡಿದ ಪ್ರಾಧ್ಯಾಪಕರು ಪೂರ್ಣ ಪ್ರಮಾಣದಲ್ಲಿ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳದ ಕಾರಣ ಪರೀಕ್ಷೆ ಫಲಿತಾಂಶ ಪ್ರಕಟದಲ್ಲಿ ವಿಳಂಬವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಆರಂಭದಲ್ಲಿ ಜೂ. 15 ಕ್ಕೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆಯಿತ್ತು. ಆದರೆ, ಈಗಿನ ಮೌಲ್ಯಮಾಪನ ವೇಗ ನೋಡಿದ್ರೆ ಜೂ. 20 ರಿಂದ 25 ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬರಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ಒನ್ಇಂಡಿಯಾ ಕನ್ನಡಕ್ಕೆ ಸ್ಪಷ್ಟಪಡಿಸಿವೆ. ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ದ್ವಿತೀಯ ಪಿಯುಸಿ ಫಲಿತಾಂಶ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ.

2ND PUC Result May Be Announced Between June 20 to 25

ವಿದ್ಯಾರ್ಥಿಗಳ ವಿವರ: 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏ. 22 ಕ್ಕೆ ಆರಂಭವಾಗಿ ಮೇ. 18 ಕ್ಕೆ ಮುಗಿದಿತ್ತು. ರಾಜ್ಯಾದ್ಯಂತ 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6.84 ಲಕ್ಷ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 3.46 ಲಕ್ಷ ಬಾಲಕರು, 3.37 ಲಕ್ಷ ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.ಇದರಲ್ಲಿ 6 ಲಕ್ಷ ವಿದ್ಯಾರ್ಥಿಗಳಷ್ಟೇ ರೆಗ್ಯುಲರ್ ವಿದ್ಯಾರ್ಥಿಗಳಾಗಿದ್ದು, 61 ಸಾವಿರ ವಿದ್ಯಾರ್ಥಿಗಳು ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ.

ಫಲಿತಾಂಶ ನೋಡುವ ವಿಧಾನ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಇದರ ಜತೆಗೆ www.karresults.nic.in ನಲ್ಲೂ ಫಲಿತಾಂಶ ನೋಡಬಹುದು. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೂ ಫಲಿತಾಂಶ ಸಂದೇಶ ಬರಲಿದೆ. ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ.

2ND PUC Result May Be Announced Between June 20 to 25

ಈ ಬಾರಿ ಫಲಿತಾಂಶ ಪ್ರಕಟ ಎಚ್ಚರ:

Recommended Video

ED ವಿಚಾರಣೆಗೆ ತೆರಳಿದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ | Oneindia Kannada

2021-22 ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶವನ್ನು ಪ್ರೌಢ ಶಿಕ್ಷಣ ಮಂಡಳಿ ಪ್ರಕಟಿಸುವ ಮೊದಲೇ ಖಾಸಗಿ ಆಪ್‌ನಲ್ಲಿ ಫಲಿತಾಂಶ ಪ್ರಕಟವಾಗಿತ್ತು. ಪರೀಕ್ಷಾ ಮಂಡಳಿಯ ಫಲಿತಾಂಶದ ಡಾಟಾ ಹ್ಯಾಕ್ ಮಾಡಿ ಫಲಿತಾಂಶ ಪ್ರಕಟವಾಗಿತ್ತು. ಶಿಕ್ಷಣ ಸಚಿವರು ಈ ವಿಷಯ ತಿಳಿದು ಗಾಬರಿಯಾಗಿದ್ದರು. ಶಿಕ್ಷಣ ಇಲಾಖೆಗೆ ಈ ವಿಚಾರ ತಿಳಿಯುತ್ತಿದ್ದಂತೆ ಖಾಸಗಿ ಆಪ್‌ನಲ್ಲಿ ಬಿಡುಗಡೆಯಾಗಿದ್ದ ಫಲಿತಾಂಶ ರದ್ದಾಗಿತ್ತು. ಆ ಬಳಿಕ ಸರ್ಕಾರದ ಅಧಿಕೃತ ತಾಣದಲ್ಲಿ ಮಾತ್ರ ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿ ಪಿಯುಸಿ ಫಲಿತಾಂಶ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸಲು ಶಿಕ್ಷಣ ಸಚಿವರು ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

English summary
second PUC result 2021-22, 2nd PUC Result may be announced between June 20 to 25 know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X