2nd Puc Results 2025: ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಣೆಗೆ ವೆಬ್‌ಸೈಟ್‌ಗಳ ವಿವರ ಇಲ್ಲಿದೆ
2nd Puc Results 2025: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಮುಗಿದಿದೆ. ಇಂದು ಅಂದರೆ (ಏಪ್ರಿಲ್ 8) ಫಲಿತಾಂಶ ಘೋಷಣೆಯಾಗಿದೆ. ಹಾಗಾದ್ರೆ ಯಾವೆಲ್ಲಾ ವೆಬ್‌ಸೈಟ್‌ಗಳಲ್ಲಿ ರಿಸಲ್ಟ್ ವೀಕ್ಷಣೆ ಮಾಡಬಹುದು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮಾರ್ಚ್ 1ರಿಂದ 20ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡದಿದ್ದವು. ಇಂದು (ಏಪ್ರಿಲ್ 8) 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದಾರೆ.

ಯಾವ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು?: ಇಂದು ಮಧ್ಯಾಹ್ನ 1.30ರ ವೇಳೆಗೆ ಫಲಿತಾಂಶವನ್ನು ಆನ್‌ಲೈನ್‌ಲ್ಲಿ ವೀಕ್ಷಣೆ ಮಾಡಬಹುದು. ಅಧಿಕೃತ ವೆಬ್‌ಸೈಟ್ https://karresults.nic.in ಅಥವಾ kseab.karnataka.gov.inಗೆ ಭೇಟಿ ನೀಡಿ ಫಲಿತಾಂಶವನ್ನು ನೋಡಬಹುದಾಗಿದೆ.
ಫಲಿತಾಂಶ ಪರಿಶೀಲನೆ ವಿಧಾನಗಳು
* ಅಭ್ಯರ್ಥಿಗಳು ಮೊದಲು ಗೂಗಲ್‌ನಲ್ಲಿ ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.inಗೆ ಭೇಟಿ ನೀಡಬೇಕು.
* ಹೋಂ ಪೇಜ್‌ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
* ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ನಮೂದಿಸಬೇಕು.
* Second PU Results 2025 ಎಂದು ಸ್ಕ್ರೀನ್‌ನಲ್ಲಿ ಕಾಣಿಸುತ್ತದೆ.
*ಬಳಿಕ ಫಲಿತಾಂಶ ವೀಕ್ಷಣೆ ಮಾಡಬಹುದು.
* ಫಲಿತಾಂಶದ ಪ್ರತಿಯನ್ನು ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ಬಾರಿ ದ್ವಿತೀಯ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಣಿ ಮಾಡಿಕೊಂಡಿದ್ದರು. ಒಟ್ಟು 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಇದೀಗ ಬಂದ ಮಾಹಿತಿ ಪ್ರಕಾರ, ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. 93.90 ಶೇಕಡಾ ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆ 93.57 ಶೇಕಡಾ ಫಲಿತಾಂಶದ ಮೂಲಕ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ.
ಯಾದಗಿರಿ ಜಿಲ್ಲೆ 48.45 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಟಾಪ್ 10 ಸ್ಥಾನಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ದಕ್ಷಿಣ, ಕೊಡಗು, ಬೆಂಗಳೂರು ಉತ್ತರ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ ಕ್ರಮವಾಗಿ ಪಡೆದುಕೊಂಡಿದೆ.
ಕಲಾ ವಿಭಾಗದಲ್ಲಿ ಬಳ್ಳಾರಿ ಮೂಲದ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರರ. 600 ಅಂಕಗಳಲ್ಲಿ 597 ಅಂಕ ಪಡೆದಿದ್ದಾರೆ. ಇನ್ನು ಬಳ್ಳಾರಿಯ ನಿರ್ಮಲಾಗೆ 596 ಅಂಕಗಳು ಬಂದಿವೆ ಎಂದು ತಿಳಿದುಬಂದಿದೆ.












Click it and Unblock the Notifications