2nd Puc Result 2025: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಹಾಗೂ ವೀಕ್ಷಿಸುವುದೇಗೆ?
2nd Puc Result 2025: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿವೆ. ಇನ್ನೂ ಫಲಿತಾಂಶಗ ಹೊರಬೀಳುವುದೊಂದೇ ಬಾಕಿ. ಇದೀಗ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಗಮನ ರಿಸಲ್ಟ್‌ನತ್ತ ನೆಟ್ಟಿದೆ. ಹಾಗಾದ್ರೆ ಫಲಿತಾಂಶ ಯಾವಾಗ ಹಾಗೂ ವೀಕ್ಷಣೆ ಮಾಡುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2025ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟ ಮಾಡಲು ಸಜ್ಜಾಗಿದೆ. ಮಾಹಿತಿಯ ಪ್ರಕಾರ ಏಪ್ರಿಲ್ 11ರಂದೇ ಪ್ರಕಟವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1ರಿಂದ ಆರಂಭವಾಗಿದ್ದು, ಮಾರ್ಚ್ 20ಕ್ಕೆ ಮುಕ್ತಾಯವಾಗಿದ್ದವು. ಇನ್ನು ಮಾರ್ಚ್ 21 ರಂದು ಆನ್ಸರ್ ಕೀ ಬಿಡುಗಡೆ ಮಾಡಲಾಗಿತ್ತು. ಇನ್ನು ಇದೇ ವಾರ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟ ಮಾಡಲಿದೆ. ಬಳಿಕ ಆನ್ಲೈನ್ ಮೂಲಕ ಫಲಿತಾಂಶ ವೀಕ್ಷಣೆ ಮಾಡಬಹುದು. ಬಳಿಕ ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಫಲಿತಾಂಶ ವೀಕ್ಷಣೆ ಮಾಡುವುದೇಗೆ?
* ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.inಗೆ ಭೇಟಿ ನೀಡಬೇಕು.
* ಹೋಂ ಪೇಜ್ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
* ನೋಂದಣು ಸಂಖ್ಯೆ ಮತ್ತು ಪಾಸ್‌ವರ್ಡ್ ನಮೂದಿಸಬೇಕು.
* Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ. ಬಳಿಕ ಫಲಿತಾಂಶ ವೀಕ್ಷಣೆ ಮಾಡಬಹುದು.
* ಫಲಿತಾಂಶದ ಪ್ರತಿಯನ್ನು ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ.
ಮಾರ್ಚ್ 1ರಿಂದ 20ರವರೆಗೆ ದ್ವಿತೀಯ ಪಿಯುಪಿ ಪರೀಕ್ಷೆಗಳು ನಡೆದಿವೆ. ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಣಿ ಮಾಡಿಕೊಂಡಿದ್ದರು. ಒಟ್ಟು 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಅಂಕಗಳಲ್ಲಿ ಯಾರು ಮೇಲುಗೈ?: ಇನ್ನು ಕಳೆದ ಮೂರು ವರ್ಷಗಳ ದ್ವಿತೀಯ ಪಿಯುಸಿ ಫಲಿತಾಂಶಗಳಲ್ಲಿ ಸತತವಾಗಿ ವಿದ್ಯಾರ್ಥಿನಿಯರು ಹುಡುಗರಿಗಿಂತ ಮೇಲುಗೈ ಸಾಧಿಸಿದ್ದಾರೆ. 2022ರಲ್ಲಿ ಶೇಕಡ 13.5ರಷ್ಟು ಗಮನಾರ್ಹ ಅಂತರದೊಂದಿಗೆ ಮೇಲುಗೈ ಸಾಧಿಸಿದ್ದರು. ಹಾಗಾದ್ರೆ ಈ ಬಾರಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂದು ಕಾದುನೋಡಬೇಕಿದೆ ಅಷ್ಟೇ.
ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
* ಮಾರ್ಚ್ 1 - ಕನ್ನಡ, ಅರೇಬಿಕ್
* ಮಾರ್ಚ್ 3 - ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
* ಮಾರ್ಚ್ 4 - ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
* ಮಾರ್ಚ್ 5 - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
* ಮಾರ್ಚ್ 7 - ಇತಿಹಾಸ, ಭೌತಶಾಸ್ತ್ರ
* ಮಾರ್ಚ್ 10 - ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
* ಮಾರ್ಚ್ 12 - ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
* ಮಾರ್ಚ್ 13 - ಅರ್ಥಶಾಸ್ತ್ರ
* ಮಾರ್ಚ್ 15 - ಇಂಗ್ಲಿಷ್
* ಮಾರ್ಚ್ 17 - ಭೂಗೋಳಶಾಸ್ತ್ರ
* ಮಾರ್ಚ್ 18 - ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
* ಮಾರ್ಚ್ 19 - ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
* ಮಾರ್ಚ್ 20 - ಹಿಂದಿ












Click it and Unblock the Notifications