2nd PUC: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಬದಲಾವಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ದಿನಾಂಕದಲ್ಲಿ ಬದಲಾವಣೆ ಮಾಡಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಈ ಹಿಂದೆ ಬಿಡುಗಡೆಗೊಳಿಸಿದ್ದ ದಿನಾಂಕ ಬದಲಾವಣೆ ಮಾಡಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇದೀಗ ಹೊಸದಾಗಿ ಪ್ರಕಟಣೆಯನ್ನು ಹೊರಡಿಸಿದ್ದು, ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿಯ ಪ್ರಕಾರ ಮೇ 23ರಿಂದ ಜೂನ್ 3 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಿಗದಿಯಾಗಿದೆ.

2nd PUC Supplementary Exam 2023: Changes In Current Time Table For Examination

ಈ ಹಿಂದೆ ದಿನಾಂಕ ಮೇ 22, 2023ರಿಂದ ಜೂನ್ 2, 2023ರವರೆಗೆ ನಡೆಸಲು ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಆದರೆ ಸಿಇಟಿಯ ಕನ್ನಡ ಭಾಷಾ ಪರೀಕ್ಷೆಯನ್ನು ಮೇ 22, 2023ರಂದು ನಡೆಸುತ್ತಿರುವ ಕಾರಣ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ.

ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿ

ಮೇ 23: ಕನ್ನಡ, ಅರೇಬಿಕ್
ಮೇ 24: ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ಮೇ 25: ಇಂಗ್ಲಿಷ್
ಮೇ 26: ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 27: ಇತಿಹಾಸ, ಸಂಖ್ಯಾಶಾಸ್ತ್ರ
ಮೇ 29: ಹಿಂದಿ
ಮೇ 30: ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ಮೇ 31: ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಜೂನ್ 1: ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂನ್ 2: ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ಜೂನ್ 3: ಅರ್ಥಶಾಸ್ತ್ರ, ಜೀವಶಾಸ್ತ್ರ

ಪರಿಷ್ಕೃತ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧಿಕೃತ ವೆಬ್‌ಸೈಟ್ https://kseab.karnataka.gov.in ರಲ್ಲಿ ವೀಕ್ಷಿಸಬಹುದು.

ಇನ್ನು ಪರೀಕ್ಷೆಯ ದಿನಾಂಕಗಳಂದು ವಿದ್ಯಾರ್ಥಿಗಳು ಎಂದಿನಂತೆ ಪರೀಕ್ಷೆ ಹಾಲ್‌ ಟಿಕೆಟ್ ಅನ್ನು ತಮ್ಮ ಕಾಲೇಜುಗಳಿಂದ ಪಡೆದು, ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು. ಪರೀಕ್ಷೆ ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನು ಓದಿಕೊಂಡು ಪರೀಕ್ಷೆ ಕೊಠಡಿಗೆ ಹಾಜರಾಗುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+