• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Breaking:ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ

|

ಬೆಂಗಳೂರು, ಜನವರಿ 29: ಕರ್ನಾಟಕ ದ್ವಿತೀಯ ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟಗೊಂಡಿದೆ.
2021ರ ಮೇ 24 ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರತಿ ವರ್ಷ ಮಾರ್ಚ್‌ನಲ್ಲಿ ನಡೆಯುತ್ತಿದ್ದ ದ್ವಿತೀಯು ಪಿಯುಸಿ ಪರೀಕ್ಷೆಗಳು ಕೊರೊನಾದಿಂದಾಗಿ ಮೇ ತಿಂಗಳಿನಲ್ಲಿ ಆರಂಭವಾಗಲಿವೆ. ಕೊರೊನಾ ಲಾಕ್‌ಡೌನ್ ಕಾರಣದಿಂದಾಗಿ ಕಾಲೇಜುಗಳನ್ನು ಕೂಡ ಮುಚ್ಚಲಾಗಿತ್ತು.

ಇದೀಗ ತರಗತಿಗಳನ್ನು ತಡವಾಗಿ ಆರಂಭಿಸಿರುವ ಕಾರಣ ಪಠ್ಯಗಳನ್ನು ಪೂರೈಲು ಸಮಯ ಬೇಕಿದ್ದು, ಮಕ್ಕಳಿಗೂ ಓದಿಕೊಳ್ಳಲು ಹೆಚ್ಚು ಸಮಯ ಬೇಕಾಗಿರುವ ಕಾರಣ ಮೇ 24 ರಿಂದ ವಾರ್ಷಿಕ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಳೆದ ವರ್ಷ ದ್ವಿತೀಯ ಪರೀಕ್ಷೆ ಸಂದರ್ಬದಲ್ಲೇ ಕೊರೊನಾ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ಕಾರಣ, ಇಂಗ್ಲಿಷ್ ಪರೀಕ್ಷೆಯನ್ನು ತಿಂಗಳುಗಳ ಬಳಿಕ ನಡೆಸಲಾಗಿತ್ತು.

ಕರ್ನಾಟಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಈ ಶೈಕ್ಷಣಿಕ ವರ್ಷಕ್ಕೆ ರಾಜ್ಯದ ಎಲ್ಲಾ ಶಾಲೆಗಳು ಬೋಧನಾ ಶುಲ್ಕದ ಶೇ.70ರಷ್ಟು ಮಾತ್ರ ಸಂಗ್ರಹಿಸಬೇಕು ಎಂದು ನಿರ್ಧರಿಸಿದೆ. ಅಭಿವೃದ್ಧಿ ಶುಲ್ಕ ಮತ್ತು ದೇಣಿಗೆಯಂತಹ ಯಾವುದೇ ಶುಲ್ಕವನ್ನು ಶಾಲೆಗಳು ವಿಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

English summary
Karnataka 2nd PUC Time Table Announced, Exam Will be held from may 24 to June 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X