ಕರ್ನಾಟಕ ಸೇರಿದಂತೆ ದೇಶದ ವಿಶ್ವವಿದ್ಯಾಲಯಗಳಿಗೆ ಕೇಂದ್ರದಿಂದ 3,600 ಕೋಟಿ ರೂ. ಅನುದಾನ
ಬೆಂಗಳೂರು, ಫೆಬ್ರವರಿ 20: ದೇಶದ ನೈಜ ವಿಕಾಸ ಸಾಕ್ಷರತೆಯಿಂದ ಮಾತ್ರ ಸಾಧ್ಯವೆಂದು ನಂಬಿರುವ ಪ್ರಧಾನಿಗಳು ವಿಶ್ವವಿದ್ಯಾಲಯಗಳಿಗೆ ಹೊಸ ಜೀವ ತುಂಬಲು ಮಹತ್ತರವಾದ ಯೋಜನೆಗೆ ಚಾಲನೆ ನೀಡಿದ್ದಾರೆ. ಯುವ ರಾಷ್ಟ್ರವಾಗಿರುವ ಭಾರತದ ಜನತೆಗೆ ಲಭ್ಯವಿರುವ ಶಿಕ್ಷಣ ಮೂಲಸೌಕರ್ಯ ಅಭಿವೃದ್ಧಿಗೊಳಿಸಿ, ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಸೇರಿದಂತೆ ದೇಶದ ಹಲವಾರು ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಉಷಾ ಯೋಜನೆಯಡಿ 78 ಯೋಜನೆಗಳಿಗಾಗಿ ರೂ. 3600 ಕೋಟಿ ಅನುದಾನ ಘೋಷಿಸಿದ್ದಾರೆ ಎಂದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಉಷಾ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ, ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ 20 ಕೋಟಿ ರೂಪಾಯಿ ದೊರೆಯಲಿದೆ ಎನ್ನುವುದು ಸಂತಸದ ವಿಷಯ ಎಂದಿದ್ದಾರೆ.
ಭಾರತದ ಯುವ ಜನತೆಗೆ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಿ ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿಯವರದ್ದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ವಿದ್ಯಾರ್ಥಿಗಳ ಅಮೂಲ್ಯ ಜೀವನ ರೂಪಿಸಲು ಪ್ರಧಾನಿ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಎಂದರು.

ಪ್ರಧಾನ ಮಂತ್ರಿಗಳು ಜಮ್ಮು ಕಾಶ್ಮೀರದಲ್ಲಿ ಈ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದು, ನಾನು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಮಂಗಳಾ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಬೆಳಗಾವಿ ವಿಶ್ವವಿದ್ಯಾಲಯದ ಕುಲಪತಿಗಳಾದ ಫೊ. ವಿಜಯ್ ನಾಗಣ್ಣನವರ ಹಾಗೂ ಪಕ್ಷದ ಪ್ರಮುಖರೊಂದಿಗೆ ಭಾಗವಹಿಸಿದ್ದೇವೆ ಎಂದು ತಿಳಿಸಿದರು.












Click it and Unblock the Notifications