ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಜನರ ಅನುಕೂಲಕ್ಕೆ 3 ಎಕರೆ ಜಾಗ: ಸಿಎಂ ಭರವಸೆ

ಬೆಂಗಳೂರು, ಫೆ.19: ಬೆಂಗಳೂರು: ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕನಿಷ್ಠ 3 ಎಕರೆ ಜಾಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು.

ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವ ಬರುವ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರಿಗೆ ಅನುಕೂಲವಾಗಲು ವಸತಿ ನಿಲಯ ನಿರ್ಮಾಣ ಮಾಡಲು ಶೀಘ್ರವೇ ಜಮೀನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

3 acres of land for the benefit of the people of North Karnataka in Bangalore: CM Bommai

ಇದರೊಂದಿಗೆ ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಬಜೆಟ್ ನಲ್ಲಿ ಆದ್ಯತೆ ನೀಡುವಂತೆ ನಿಯೋಗ ಮಾಡಿದ ಮನವಿಗೆ ಸಿಎಂ ಸಕಾರಾತ್ಮಕ ಸ್ಪಂದಿಸಿದರು.

ಮುಖ್ಯಮಂತ್ರಿಗಳ ಭೇಟಿಯ ನಿಯೋಗದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ, ಪದಾಧಿಕಾರಿಗಳಾದ ಬಸವರಾಜ ಬೇಳೂರು, ಶ್ರೀಧರ ಕಲ್ಲೂರು, ಗಂಗಾಧರ ವಾಲಿ, ಅಯ್ಯನಗೌಡ ಬಿರಾದಾರ, ಸಂತೋಷ ಬಸೆಟ್ಟಿ, ಭೀಮಣ್ಣ ನಲತ್ವಾಡ, ಪತ್ರಕರ್ತ ಶಂಕರ ಪಾಗೋಜಿ ಹಾಜರಿದ್ದರು.

ಕಾಂಗ್ರೆಸ್ ವಿರೋಧಪಕ್ಷವಾಗಿರಲು ನೈತಿಕತೆ ಕಳೆದುಕೊಂಡಿದೆ: ಬೊಮ್ಮಾಯಿ

ಕಾಂಗ್ರೆಸ್ ವಿರೋಧಪಕ್ಷವಾಗಿರಲು ನೈತಿಕತೆ ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಧರಣಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದವರು ಆಡಳಿತ ಪಕ್ಷವಾಗಿಯಂತೂ ಅಲ್ಲ, ವಿರೋಧಪಕ್ಷವಾಗಿರಲೂ ಸಹ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+