ಚಿಕ್ಕಮಗಳೂರು : ರಸ್ತೆ ಅಪಘಾತ, ಮೂವರು ಬಿಜೆಪಿ ಕಾರ್ಯಕರ್ತರ ದುರ್ಮರಣ

ಚಿಕ್ಕಮಗಳೂರು, ಏಪ್ರಿಲ್ 23 : ಚಿಕ್ಕಮಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ. ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತರೀಕೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ಸೋಮವಾರ ಸಂಜೆ ಈ ಅಪಘಾತ ನಡೆದಿದೆ. ಬೊಲೆರೋ ಪಿಕಪ್ ವಾಹನ ಮರಕ್ಕೆ ಡಿಕ್ಕಿ ಹೊಡೆದು, ಉರುಳಿ ಬಿದ್ದಿದ್ದು, ಅದರಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

3 BJP activists dies in road accident

ಮೃತಪಟ್ಟವರನ್ನು ಜಲಧಿಹಳ್ಳಿ ಗ್ರಾಮದ ಆಂಜನೇಯ (45), ಸುರೇಶ್ (40) ಮತ್ತು ಆನಂದ (32) ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತರೀಕೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ಎಸ್.ಸುರೇಶ್ ಅವರು ಇಂದು 2018ರ ವಿಧಾನಸಭೆ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಈ ಮೂವರು ತೆರಳಿದ್ದರು. ಅಲ್ಲಿಂದ ವಾಪಸ್ ಬರುವಾಗ ಈ ಅಪಘಾತ ನಡೆದಿದೆ.

ಅಜ್ಜಂಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+