ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ : ಹೆಬ್ಬಾಳ ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಕಸರತ್ತು

|
Google Oneindia Kannada News

ಬೆಂಗಳೂರು, ಜನವರಿ 19 : ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಹೆಬ್ಬಾಳ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಗೊಂದಲವಿರುವ ಕಾರಣ, ಮತ್ತೊಮ್ಮೆ ಸಭೆ ನಡೆಸಲು ತೀರ್ಮಾನ ಕೈಗೊಂಡಿದೆ. ಫೆ.13ರಂದು ಮೂರು ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.

ಸೋಮವಾರ ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವದುರ್ಗ ಕ್ಷೇತ್ರಕ್ಕೆ ಶಿವನಗೌಡ ನಾಯಕ್, ಬೀದರ್ ಕ್ಷೇತ್ರಕ್ಕೆ ಸೂರ್ಯಕಾಂತ ನಾಗಮಾರಪಲ್ಲಿ ಅವರು ಅಭ್ಯರ್ಥಿ ಎಂದು ತೀರ್ಮಾನಿಸಲಾಯಿತು. [ಉಪ ಚುನಾವಣೆ : ಕಾಂಗ್ರೆಸ್ ವೀಕ್ಷಕರ ನೇಮಕ]

prahlad joshi

ಹೆಬ್ಬಾಳ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ನಿಧನರಾದ ಶಾಸಕ ಜಗದೀಶ್ ಕುಮಾರ್ ಪತ್ನಿ ಲತಾ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡ ಅವರ ಸೊಸೆ ಸೌಮ್ಯ ಜಗದೀಶ್ ಹೆಸರುಗಳ ಬಗ್ಗೆ ಚರ್ಚೆ ನಡೆಸಲಾಯಿತು. ಆದರೆ, ಅಭ್ಯರ್ಥಿಯನ್ನು ಅಂತಿಮಗೊಳಿಸಲು ಸಭೆ ವಿಫಲವಾಯಿತು. [ಉಪ ಚುನಾವಣೆ ವೇಳಾಪಟ್ಟಿ]

ಅಂತಿಮ ಘೋಷಣೆಯಾಗಿಲ್ಲ : ಬೀದರ್ ಕ್ಷೇತ್ರಕ್ಕೆ ಸೂರ್ಯಕಾಂತ ನಾಗಮಾರಪಲ್ಲಿ ಅವರು ಅಭ್ಯರ್ಥಿ ಎಂದು ತೀರ್ಮಾನಿಸಲಾಯಿತು. ಆದರೆ, ಅಂತಿಮ ಘೋಷಣೆ ಮಾಡಲಿಲ್ಲ. ಬೀದರ್‌ನಲ್ಲಿ ಸೂರ್ಯಕಾಂತ ನಾಗಮಾರಪಲ್ಲಿ ಅವರ ಬದಲು ಪ್ರಕಾಶ್ ಖಂಡ್ರೆ ಅವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. [2013ರ ಚುನಾವಣೆ : ಗೆದ್ದವರು, ಸೋತವರು]

ದೇವದುರ್ಗ ಕ್ಷೇತ್ರದ ವಿಚಾರದಲ್ಲಿ ಹೆಚ್ಚಿನ ಗೊಂದಲಗಳಿಲ್ಲ. ಶಿವನಗೌಡ ನಾಯಕ್ ಅವರೇ ಅಧಿಕೃತ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಜನವರಿ 20ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 27 ಕೊನೆಯ ದಿನವಾಗಿದೆ.

ಸಭೆಯ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು, 'ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರು ಸಭೆಗೆ ಆಗಮಿಸಿರಲಿಲ್ಲ. ಆದ್ದರಿಂದ, ಜನವರಿ 21ರಂದು ಮತ್ತೊಮ್ಮೆ ಸಭೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ' ಎಂದು ಹೇಳಿದರು.

ಹೆಬ್ಬಾಳ ಶಾಸಕ ಜಗದೀಶ್ ಕುಮಾರ್ (ಬಿಜೆಪಿ), ಬೀದರ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ (ಕೆಜೆಪಿ) ಮತ್ತು ದೇವದುರ್ಗ ಶಾಸಕ ವೆಂಕಟೇಶ ನಾಯಕ್ (ಕಾಂಗ್ರೆಸ್) ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಫೆಬ್ರವರಿ 13ರಂದು ಮತದಾನ ನಡೆಯಲಿದ್ದು, ಫೆ.16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

English summary
Karnataka BJP not finalized candidates name for Hebbal, Devadurga and Bidar constituency by poll scheduled on February 13, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X