ಕನಕಪುರ ಮಾರ್ಗದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ 3 ಅಡಿ ನೀರು

By: ರಾಮನಗರ ಪ್ರತಿನಿಧಿ
Subscribe to Oneindia Kannada

ರಾಮನಗರ, ಅಕ್ಟೋಬರ್ 11: ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸುರಿದ ಜೋರು ಮಳೆಯಿಂದ ಬಹುತೇಕ ಕೆರೆ- ಕಟ್ಟೆಗಳು ಭರ್ತಿಯಾಗಿ ಕೋಡಿ ಹರಿದಿವೆ. ಕನಕಪುರ ತಾಲೂಕಿನ ಹಾರೋಹಳ್ಳಿ ಸಮೀಪದ ಗಾಣಾಳುದೊಡ್ಡಿ ಕೆರೆ ಕೋಡಿ ಒಡೆದ ಪರಿಣಾಮ ಬೆಂಗಳೂರು- ಕನಕಪುರ-ಮೈಸೂರು ಹೆದ್ದಾರಿ ನದಿಯಂತಾಗಿದೆ.

ಭೈರವಾಡಗಿಯಲ್ಲಿ ಗೋಡೆ ಕುಸಿದು ತಾಯಿ-ಮಗಳ ಸಾವು

ರಸ್ತೆಯಲ್ಲಿ ಮೂರು ಅಡಿಯಷ್ಟು ನೀರು ಹರಿಯುತ್ತಿದೆ. ಇದರಿಂದಾಗಿ ಕನಕಪುರ ಮಾರ್ಗದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಕೆರೆ ಕೋಡಿ ಸಮೀಪ ನಾಲ್ಕು ಅಡಿಯಷ್ಟು ನೀರು ಹರಿಯುತ್ತಿದ್ದು, ರಸ್ತೆಯ ಎರಡೂ ಕಡೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ.

3 feet water on Bengaluru- Mysuru highway

ನೀರು ಸರಾಗವಾಗಿ ಹರಿದು ಹೊರಹೋಗದ ಪರಿಣಾಮ ರಸ್ತೆಯ ತುಂಬ ನಿಂತಿರುವುದು ಕಂಡುಬಂದಿದೆ. ಶಾಲೆ- ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಕೆಲಸಗಳಿಗೆ ಹೊರಟ ಜನರಿಗೆ ತೊಂದರೆಯಾಗಿದೆ. ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರು ಭೇಟಿ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ನೀರಿನ ಹರಿವು ಕಡಿಮೆಯಾಗುವ ತನಕ ಸಂಚಾರ ನಿಲ್ಲಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
4 feet water on Bengaluru- Mysuru highway, Kanakapura. Traffic jam and people not able to travel on this road. Tuesday heavy rain in Ramanagara district caused this situation.
Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ