IPS: ರವಿಕಾಂತೇ ಗೌಡ ಸೇರಿ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜನವರಿ 18: ಕರ್ನಾಟಕ ಸರ್ಕಾರ ಪೊಲೀಸ್ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಬಿ. ಆರ್. ರವಿಕಾಂತೇ ಗೌಡ ಅವರನ್ನು ಪೂರ್ವ ವಿಭಾಗದ ಐಜಿಪಿಯಾಗಿ ನೇಮಕ ಮಾಡಿ ಸರ್ಕಾರ ಆದೇಶವನ್ನು ಹೊರಡಿಸಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ನಾಗಪ್ಪ ಎಸ್. ಪರೀತ್ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-4) ಆದೇಶವನ್ನು ಹೊಎಡಿಸಿದ್ದಾರೆ. ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.

3 IPS officers Transferred By Karnataka Government

ವರ್ಗಾವಣೆಗೊಂಡ ಅಧಿಕಾರಿಗಳು

* ಹುದ್ದೆಯ ನಿರೀಕ್ಷೆಯಲ್ಲಿದ್ದ ಎನ್. ಸತೀಶ್ ಕುಮಾರ್, ಐಪಿಎಸ್ (ಕೆಎನ್ 2003) ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಹೆಡ್ ಕ್ವಾರ್ಟರ್ಸ್‌-1, ಬೆಂಗಳೂರು ಹುದ್ದೆಗೆ ನೇಮಿಸಲಾಗಿದೆ. ಈ ಹುದ್ದೆಯಲ್ಲಿದ್ದ ಡಾ. ಬಿ. ಆರ್. ರವಿಕಾಂತೇ ಗೌಡ ವರ್ಗಾವಣೆ ಮಾಡಲಾಗಿದೆ.

* ಡಾ. ಬಿ. ಆರ್. ರವಿಕಾಂತೇ ಗೌಡ, ಐಪಿಎಸ್ (ಕೆಎನ್ 2005). ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಹೆಡ್ ಕ್ವಾರ್ಟರ್ಸ್‌-1, ಬೆಂಗಳೂರು ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಪೂರ್ವ ವಿಭಾಗ, ದಾವಣಗೆರೆ ಹುದ್ದೆಗೆ ನೇಮಕ. ಈ ಹುದ್ದೆಯಲ್ಲಿದ್ದ ಬಿ. ರಮೇಶ್ ವರ್ಗಾವಣೆ.

* ಬಿ. ರಮೇಶ್, ಐಪಿಎಸ್ (ಕೆಎನ್ 2009), ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಪೂರ್ವ ವಿಭಾಗ, ದಾವಣಗೆರೆ ವರ್ಗಾವಣೆ. ತತ್‌ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ಜಂಟಿ ಆಯುಕ್ತರು (ಪೂರ್ವ) ಬೆಂಗಳೂರು ನಗರ ಹುದ್ದೆಗೆ ನೇಮಕ.

ಡಾ. ಬಿ. ಆರ್. ರವಿಕಾಂತೇ ಗೌಡ: ಡಾ. ಬಿ. ಆರ್. ರವಿಕಾಂತೇ ಗೌಡ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ. ಹಲವು ಹುದ್ದೆಗಳಲ್ಲಿ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ. ಮೂಲತ: ಮಂಡ್ಯ ಜಿಲ್ಲೆಯ ಬೆಸಗರಹಳ್ಳಿ ಗ್ರಾಮದವರಾದ ಅವರು ಎಂ.ಟೆಕ್ ಪದವೀಧರರು.

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯವದಲ್ಲಿ ಪರೀಕ್ಷೆ ಬರೆದು ಡೆಪ್ಯೂಟಿ ಸುಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಗೆ ಆಯ್ಕೆಯಾಗಿ ನಂತರ ಆಯ್ಕೆ ಶ್ರೇಣಿ ಹುದ್ದೆಗೆ ಬಡ್ತಿ ಪಡೆದಿದ್ದಾರೆ.

ಈ ಹಿಂದೆ ನಂಜನಗೂಡು ಉಪ ವಿಭಾಗದ ಡಿಎಸ್‌ಪಿ, ಹುಬ್ಬಳ್ಳಿ-ಧಾರವಾಡ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ, ಬೆಂಗಳೂರು ನಗರ ಅಪರಾಧ ಡಿಸಿಪಿಯಾಗಿ, ಬೆಂಗಳೂರಿನ ರಾಜ್ಯ ಗುಪ್ತ ವಾರ್ತೆಯ ಎಸ್‌ಪಿಯಾಗಿ, ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ, ಬೆಂಗಳೂರು ನಗರ ಈಶಾನ್ಯ ವಿಭಾಗದ ಡಿಸಿಪಿಯಾಗಿ, ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. 2002 ಹಾಗೂ 2007ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿದ್ದಾರೆ.

ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬಳಿಕ ಪೊಲೀಸ್ ಇಲಾಖೆಯಲ್ಲಿ ಡಿವೈಎಸ್‌ಪಿ ಮಟ್ಟದ ಹುದ್ದೆಗಳ ವರ್ಗಾವಣೆಯನ್ನು ಮಾಡಿತ್ತು. ಈಗ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+