ಚಿಕ್ಕಬಳ್ಳಾಪುರ: ದೇವರ ದರ್ಶನಕ್ಕೆ ಹೊರಟವರು ಮಸಣ ಸೇರಿದರು

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 12 : ದೇವರ ದರ್ಶನಕ್ಕೆ ಅಂತ ಹೊರಟವರು ಮಸಣ ಸೇರಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಹೊರವಲಯದ ಮಾಡಿಕೆರೆ ಕ್ರಾಸ್ ಬಳಿ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕುರಟಹಳ್ಳಿ ಗ್ರಾಮದ 45 ವರ್ಷದ ಮುರುಳಿ, ಅಶ್ವತಪ್ಪ(55) ಹಾಗೂ ರಾಮಪುರ ಗ್ರಾಮದ ಚಲಪತಿ (35 ) ಮೃತ ದುರ್ದೈವಿಗಳು. ಮಂಗಳವಾರ ಆಂಧ್ರದ ಬಾಯಿಕೊಂಡ ಗಂಗಮ್ಮ ದೇವಸ್ಥಾನಕ್ಕೆ ಆಟೋ ಮೂಲಕ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

3 killed as auto and lorry collide head at Chintamani

ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ವ್ಯಕ್ತಿ ಕಾಚಹಳ್ಳಿ ಗ್ರಾಮದ 50 ವರ್ಷದ ನಂಜಂಡಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೊದಲು ಆಟೋ ಮೇಲೆ ಹರಿದ ಲಾರಿ ನಂತರ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+