ಕರ್ನಾಟಕದಲ್ಲಿ ಹೋಂ ಕ್ವಾರಂಟೈನ್ ನಿಯಮ ಮುರಿದವರು 3 ಲಕ್ಷ ಜನ!

ಬೆಂಗಳೂರು, ಜುಲೈ 26 : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 90,942ಕ್ಕೆ ಏರಿಕೆಯಾಗಿದೆ. ಹೋಂ ಕ್ವಾರಂಟೈನ್ ನಿಯಮಗಳನ್ನು ಸಹ ಜನರು ಪಾಲನೆ ಮಾಡುತ್ತಿಲ್ಲ. ಇದುವರೆಗೂ 3,78,299 ಜನರು ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡಿದ್ದಾರೆ.

Recommended Video

      Sonu Sood gifts tractor for Andhra Pradesh farmer | Oneindia Kannada

      ಪ್ರಸ್ತುತ ಮಾಹಿತಿ ಪ್ರಕಾರ ರಾಜ್ಯದಲ್ಲಿ 1.83 ಲಕ್ಷ ಜನರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಇವರಲ್ಲಿ ಅನೇಕರು ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಸಂಚಾರ ನಡೆಸಿದ್ದಾರೆ. ಪದೇ ಪದೇ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ 1,997 ಮಂದಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

      ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ. ಸೋಂಕಿತರು ನಿಯಮ ಉಲ್ಲಂಘನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ತಿರುಗಾಟ ನಡೆಸಿದರೆ ಸೋಂಕು ಇತರರಿಗೆ ಹಬ್ಬುವ ಸಾಧ್ಯತೆ ಇದೆ.

      3 Lakh People Not Followed Home Quarantine Rules

      ಆರೋಗ್ಯ ಇಲಾಖೆ ನಿಯಮಗಳ ಪ್ರಕಾರ ಸೋಂಕು ಶಂಕಿತರು, ರೋಗಿಗಳ ಜೊತೆ ಸಂಪರ್ಕ ಹೊಂದಿರುವವರು, ವಿದೇಶದಿಂದ ಬಂದವರು, ಅನ್ಯ ರಾಜ್ಯಗಳಿಗೆ ಪ್ರಯಾಣ ಮಾಡಿದ ಇತಿಹಾಸ ಹೊಂದಿದ್ದವರು. ಹೋಂ ಕ್ವಾರಂಟೈನ್‌ನಲ್ಲಿ ಇರಬೇಕು.

      14 ದಿನಗಳ ಹೋಂ ಕ್ವಾರಂಟೈನ್ ಸಮಯದಲ್ಲಿ ಜನರು ಮನೆಯಿಂದ ಹೊರ ಬರುವಂತಿಲ್ಲ. ಆದರೆ, ಜನರು ನಿಯಮಗಳನ್ನು ಉಲ್ಲಂಘನೆ ಮಾಡಿ ಹೊರಗೆ ತಿರುಗಾಡಿದ್ದಾರೆ. ಹೀಗೆ ನಿಯಮ ಉಲ್ಲಂಘಟನೆ ಮಾಡಿದ ಅನೇಕ ಜನರಿಗೆ ಎಚ್ಚರಿಕೆ ನೀಡಿ ಸಾಂಸ್ಥಿಕ ಕ್ವಾರಂಟೈನ್‌ಗೂ ಹಾಕಲಾಗಿದೆ.

      ಯಾವ-ಯಾವ ಜಿಲ್ಲೆಗಳು: ಹೋಂ ಕ್ವಾರಟೈನ್ ಉಲ್ಲಂಘನೆ ಮಾಡಿದ ಬಗ್ಗೆ ಬೆಂಗಳೂರು ಗ್ರಾಮಾಂತರಲ್ಲಿ 154, ಬೆಳಗಾವಿ 131, ಕಲಬುರಗಿ 108, ವಿಜಯಪುರ 104, ಬಾಗಲಕೋಟೆ 102, ದಾವಣಗೆರೆ 98 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+