ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಶಾಸಕಾಂಗ ಸಭೆ : ಮೂವರು ಶಾಸಕರು ಗೈರು!

|
Google Oneindia Kannada News

ಬೆಂಗಳೂರು, ಮೇ 29 : ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮೂವರು ಶಾಸಕರು ಗೈರು ಹಾಜರಾಗಿದ್ದಾರೆ. ಪಕ್ಷದ ನಾಯಕರ ವಿರುದ್ಧ ಇನ್ನೂ ಶಾಸಕರಲ್ಲಿ ಅಸಮಾಧಾನವಿದೆ ಎಂಬುದು ಇದರಿಂದ ಸಾಬೀತಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಪಕ್ಷೇತರ ಶಾಸಕರ ಸಭೆರಮೇಶ್ ಜಾರಕಿಹೊಳಿ ನಿವಾಸದಲ್ಲಿ ಪಕ್ಷೇತರ ಶಾಸಕರ ಸಭೆ

ಶಾಸಕರಾದ ರಮೇಶ್ ಜಾರಕಿಹೊಳಿ (ಗೋಕಾಕ್), ರೋಷನ್ ಬೇಗ್ (ಶಿವಾಜಿನಗರ), ಪಕ್ಷೇತರ ಶಾಸಕ ಎಚ್.ನಾಗೇಶ್ (ಮುಳುಬಾಗಿಲು) ಅವರು ಸಭೆಗೆ ಗೈರು ಹಾಜರಾಗಿದ್ದರು. ಮೂವರು ಶಾಸಕರ ಗೈರು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮೈತ್ರಿ ಸರಕಾರ ಉಳಿಸಿಕೊಳ್ಳುವ ಕಸರತ್ತು, ಸರಣಿ ಸಭೆಗಳುಮೈತ್ರಿ ಸರಕಾರ ಉಳಿಸಿಕೊಳ್ಳುವ ಕಸರತ್ತು, ಸರಣಿ ಸಭೆಗಳು

ರಮೇಶ್ ಜಾರಕಿಹೊಳಿ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವುದು ಗುಟ್ಟಾಗಿ ಉಳಿದಿಲ್ಲ. ರೋಷನ್ ಬೇಗ್ ಅವರು ಕಳೆದ ವಾರ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಕೆ.ಸಿ.ವೇಣುಗೋಪಾಲ್ ಅವರನ್ನು ಬಫೂನ್ ಎಂದು ಕರೆದಿದ್ದರು.

ಕಂಪ್ಲಿ ಶಾಸಕ ಗಣೇಶ್ ಅಮಾನತು ವಾಪಸ್ ಪಡೆದ ಕಾಂಗ್ರೆಸ್‌ಕಂಪ್ಲಿ ಶಾಸಕ ಗಣೇಶ್ ಅಮಾನತು ವಾಪಸ್ ಪಡೆದ ಕಾಂಗ್ರೆಸ್‌

ಡಿ.ಕೆ.ಸುರೇಶ್‌ ಅವರಿಗೆ ಅಭಿನಂದನೆ

ಡಿ.ಕೆ.ಸುರೇಶ್‌ ಅವರಿಗೆ ಅಭಿನಂದನೆ

ಶಾಸಕಾಂಗ ಸಭೆಯ ಆರಂಭಕ್ಕೂ ಮುನ್ನ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಡಿ.ಕೆ.ಸುರೇಶ್ ಅವರನ್ನು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ರಾಜ್ಯದಿಂದ ಆಯ್ಕೆಯಾದ ಏಕೈಕ ಕಾಂಗ್ರೆಸ್ ಸಂಸದರು ಅವರು.

ರಮೇಶ್ ಜಾರಕಿಹೊಳಿ ನಡೆ ಏನು?

ರಮೇಶ್ ಜಾರಕಿಹೊಳಿ ನಡೆ ಏನು?

ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರು ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದಾರೆ. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹಬ್ಬಿದ್ದು, ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ಅವರು ದೂರವಾಗಿದ್ದಾರೆ. ಇಂದಿನ ಸಭೆಗೂ ಅವರು ಗೈರಾಗಿದ್ದಾರೆ.

ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ್ದರು

ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ್ದರು

ಮುಳುಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಅವರು ಮಂಗಳವಾರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದರು. ಬುಧವಾರ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದರು. ಅವರು ಸಭೆಗೆ ಗೈರಾಗಿದ್ದು ಅಚ್ಚರಿಗೆ ಕಾರಣವಾಗಿದೆ.

ವೇಣುಗೋಪಾಲ್ ಸಭೆ

ವೇಣುಗೋಪಾಲ್ ಸಭೆ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಅತೃಪ್ತ ಶಾಸಕರ ಜೊತೆ ಇಂದು ಸಭೆ ನಡೆಸಲಿದ್ದಾರೆ. ಆದರೆ, ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಅವರು ಸಭೆಗೆ ಗೈರಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

English summary
3 MLAs failed to attend the Congress CLP meeting on May 29, 2019. Meeting chaired by party in-charge of Karnataka K.C.Venugopal and Former CM Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X