Gruha Lakshmi Scheme: ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್ : ಈ ದಿನ ಒಟ್ಟಿಗೆ 3 ತಿಂಗಳ ಹಣ ಖಾತೆಗೆ

ಬೆಳಗಾವಿ,ಫೆಬ್ರವರಿ 21: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಂತ ಹಂತವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಿತ್ತು. ಕಾಂಗ್ರೆಸ್ ಸರ್ಕಾರದ ಪ್ರಮುಖ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಸಹಾಯ ನೀಡುವ ಮಹತ್ವದ ಯೋಜನೆಯಾಗಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗದ ಹಿನ್ನೆಲೆ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದರು. ಇದೀಗ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ ನ್ಯೂಸ್‌ ನೀಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿ, ಮುಂದಿನ 8-10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನೂ 8-10 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ನನಗೆ ಅಪಘಾತವಾಗಿ 40 ದಿನ ಆಸ್ಪತ್ರೆಯಲ್ಲಿ ಇದ್ದ ಕಾರಣ ಗೃಹ ಲಕ್ಷ್ಮಿ ಹಣ ಖಾತೆಗೆ ಹಾಕುವ ಪ್ರಕ್ರಿಯೆ ವಿಳಂಬವಾಗಿದೆ. ಇಷ್ಟು ದಿನ ವಿಳಂಬವಾಗಿದ್ದ ಹಣವನ್ನು 8-10 ದಿನದೊಳಗೆ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

3 months Gruha Lakshmi Scheme money will be deposited in the account together Hebbalkar

ಗೃಹ ಲಕ್ಷ್ಮಿ ಹಣವನ್ನು ಹೊಸ ಪ್ಯಾಟರ್ನ್ ಮೂಲಕ ಹಾಕಲಾಗುತ್ತಿದೆ. ಬೆಂಗಳೂರು ಸುತ್ತಮುತ್ತಲ 5 ತಾಲೂಕು ಪಂಚಾಯಿತಿಗಳಿಗೆ ದುಡ್ಡು ಹಾಕಿದ್ದೇವೆ. ಅಲ್ಲಿಂದ ಸಿಡಿಪಿಒ ಮೂಲಕ ಹಣ ಬಿಡುಗಡೆ ಮಾಡಲಾಗಿದೆ. ಇನ್ನೂ ಸರಿಯಾಗಿ ಒಂದು ವಾರ, 10 ದಿನದೊಳಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುವುದು. ಹಣಕಾಸು ಇಲಾಖೆ ಎರಡು ತಿಂಗಳ ಹಣ ಹಾಕು ಮಾಹಿತಿ ಇದೆ. ನಾನು ವಿಧಾನಮಂಡಲ ಬಜೆಟ್ ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಅಲ್ಲಿ ಮೂರು ತಿಂಗಳ ಹಣ ಹಾಕುವ ಕೆಲಸ ಮಾಡುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಿಳಿಸಿದ್ದಾರೆ.

ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ‌ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ವಿರೋಧ ಪಕ್ಷದವರಿಗೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ.‌ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡಿಕೊಂಡು ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+