ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ವರ್ಷದ ಕೊಡುಗೆ : 3 ವೈದ್ಯಕೀಯ ಕಾಲೇಜು ಆರಂಭ

|
Google Oneindia Kannada News

ಬೆಂಗಳೂರು, ಡಿಸೆಂಬರ್ 26 : ಹೊಸ ವರ್ಷಕ್ಕೆ ಕರ್ನಾಟಕ ಸರ್ಕಾರ ಮೂರು ವೈದ್ಯಕೀಯ ಕಾಲೇಜುಗಳನ್ನು ಕೊಡುಗೆಯಾಗಿ ನೀಡುತ್ತಿದೆ. 2016ರ ಶೈಕ್ಷಣಿಕ ವರ್ಷದಿಂದ ಮೂರು ಕಾಲೇಜುಗಳು ಆರಂಭವಾಗಲಿದ್ದು, 450 ಸೀಟುಗಳು ಹೆಚ್ಚುವರಿಯಾಗಿ ಲಭ್ಯವಾಗಲಿವೆ.

ಚಾಮರಾಜನಗರ, ಕಾರವಾರ, ಮಡಿಕೇರಿ ವೈದ್ಯಕೀಯ ಕಾಲೇಜುಗಳು 2016ರಿಂದ ಕಾರ್ಯಾರಂಭ ಮಾಡಲಿವೆ. ಭಾರತೀಯ ವೈದ್ಯ ಮಂಡಳಿ (ಎಂಸಿಐ) ಕಾಲೇಜು ಆರಂಭಿಸಲು ಒಪ್ಪಿಗೆ ನೀಡಿದೆ. ಪ್ರತಿ ಕಾಲೇಜುಗಳು 150 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಿವೆ. [ಮೂರು ವೈದ್ಯಕೀಯ ಕಾಲೇಜು ಈ ವರ್ಷ ಆರಂಭ]

medical college

ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಎಸ್‌.ಎಸ್.ಹರಸೂರು ಅವರು ಈ ಕುರಿತು ಮಾಹಿತಿ ನೀಡಿದ್ದು, 'ಮೂರು ಕಾಲೇಜುಗಳ ಕಟ್ಟಡಗಳು ಪೂರ್ಣಗೊಂಡಿವೆ. ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. 2016-17ರ ಶೈಕ್ಷಣಿಕ ವರ್ಷದಿಂದಲೇ ಪ್ರವೇಶಾವಕಾಶ ಕಲ್ಪಿಸಲಾಗುತ್ತದೆ' ಎಂದು ಹೇಳಿದ್ದಾರೆ. [ಆರು ಜಿಲ್ಲೆಗಳಲ್ಲಿ ನೂತನ ಮೆಡಿಕಲ್ ಕಾಲೇಜು ಸ್ಥಾಪನೆ]

16 ಮೆಡಿಕಲ್ ಕಾಲೇಜುಗಳು : ಈ ಕಾಲೇಜುಗಳು ಆರಂಭಗೊಂಡರೆ ರಾಜ್ಯದಲ್ಲಿರುವ ವೈದ್ಯಕೀಯ ಕಾಲೇಜುಗಳ ಸಂಖ್ಯೆ 16ಕ್ಕೆ ಏರಿಕೆಯಾಗಲಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಹಾಸನ, ಮಂಡ್ಯ, ಶಿವಮೊಗ್ಗ, ಬೀದರ್, ರಾಯಚೂರು, ಬೆಳಗಾವಿಯಲ್ಲಿ ಈಗಾಗಲೇ ಕಾಲೇಜುಗಳು ಆರಂಭಗೊಂಡಿವೆ. [ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಸ್ಥಾಪನೆ]

ನಿರೀಕ್ಷೆಯಂತೆ 2016ಕ್ಕೆ ಆರು ವೈದ್ಯಕೀಯ ಕಾಲೇಜುಗಳು ಆರಂಭವಾಬೇಕಿತ್ತು. ಆದರೆ, ಮೂಲಭೂತ ಸೌಕರ್ಯಗಳ ವ್ಯವಸ್ಥೆ ಇಲ್ಲದ ಕಾರಣ ಭಾರತೀಯ ವೈದ್ಯ ಮಂಡಳಿ ಕಲಬುರಗಿ, ಗದಗ ಮತ್ತು ಕೊಪ್ಪಳದಲ್ಲಿನ ಕಾಲೇಜುಗಳ ಆರಂಭಕ್ಕೆ ಒಪ್ಪಿಗೆ ನೀಡಿಲ್ಲ.

ಕಾಲೇಜಿಗೆ ಅನುದಾನದ ಕೊರತೆ : 2012ರಲ್ಲಿ ಕರ್ನಾಟಕ ಸರ್ಕಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸಲು ಒಪ್ಪಿಗೆ ನೀಡಿದೆ. ಆದರೆ, ಅನುದಾನದ ಕೊರತೆಯಿಂದಾಗಿ ಕಾಲೇಜು ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿದೆ.

ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕಾಲೇಜು ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಅನುದಾನ ಬಿಡುಗಡೆ ಮಾಡದಿದ್ದರೆ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

English summary
Karnataka will offer 450 more medical seats under the government quota from the 2016-17 academic year. Three new medical colleges at Chamarajanagar, Karwar and Madikeri now ready for inauguration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X