3 Railway New Project: ಗದಗ-ಯಲವಿಗಿ ಲೈನ್ ಸೇರಿ 3 ಹೊಸ ಯೋಜನೆ ಆರಂಭಕ್ಕೆ ಆಗ್ರಹ: ಕೇಂದ್ರಕ್ಕೆ ಬೊಮ್ಮಾಯಿ ಪತ್ರ
ನವದೆಹಲಿ/ಬೆಂಗಳೂರು: ಉತ್ತರ ಕರ್ನಾಟಕದ ಪ್ರಮುಖ ರೈಲು ಯೋಜನೆಗಳಲ್ಲಿ ಒಂದಾಗಿರುವ ಗದಗ ಮತ್ತು ಯಲವಿಗಿ ಮಧ್ಯದ (Gadag-Yalvigi Railway Project) ರೈಲು ಯೋಜನೆ ಇಷ್ಟರಲ್ಲಾಗಲೇ ವಿಸೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿ ಕಾಮಗಾರಿ ಆರಂಭವಾಗಬೇಕಿತ್ತು. ವಿಳಂಬ ವಾಗುತ್ತಿರುವ ಕಾರಣ ಈ ಭಾಗದ ಸಂಸದರು ಮತ್ತು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್ ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವುದು ಸೇರಿದಂತೆ ಉತ್ತರ ಕರ್ನಾಟಕದ 03 ರೈಲು ಯೋಜನೆಗಳ ಆರಂಭ, ತ್ವರಿತ ಪೂರ್ಣಕ್ಕೆ ಬೊಮ್ಮಾಯಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಜೊತೆಗೆ ಸಚಿವರನ್ನು ದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ಈ ರೈಲ್ವೆ ಯೋಜನೆಗಳ ಅಗತ್ಯತೆ, ಸಾರಿಗೆ ಉತ್ತೇಜನ, ಜನರ ಬೇಡಿಕೆ ಬಗ್ಗೆ ತಿಳಿಸಿದ್ದಾರೆ.

2026 ರಲ್ಲಿ ಯೋಜನೆ ಕಾರ್ಯಾರಂಭ ಸಾಧ್ಯತೆ
ಯೋಜನೆಗೆ ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿದ್ದು, ಡಿಪಿಆರ್ ಗೆ ಅನುಮತಿ ನೀಡಿ ಯೋಜನೆ ಕಾರ್ಯಾರಂಭ ಮಾಡಬೇಕು. ನಾನು ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಕೈಗೊಳ್ಳಲು ಮನವಿ ಮಾಡುತ್ತೇನೆ. ಡಿಪಿಆರ್ ಗೆ ಒಪ್ಪಿಗೆ ನೀಡಿದಲ್ಲಿ 2026 ರಲ್ಲಿ ಯೋಜನೆ ಆರಂಭಿಸಿ ವರ್ಷಗಳಲ್ಲಿ ಪೂರ್ಣಗೊಳಿಸಲು ಅನುಕೂಲವಾಗಲಿದೆ ಎಂದು ಕೇಳಿಕೊಂಡಿದ್ದಾರೆ. ಇದಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಮಧ್ಯ ಕರ್ನಾಟಕದ ಹಾವೇರಿ ಜಿಲ್ಲೆ ವ್ಯಾಪ್ತಿಯ ರಾಣೆಬೆನ್ನೂರಿನಿಂದ ಮಲೆನಾಡಿನ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗ ಯೋಜನೆ ಆರಂಭಿಸುವ ಉದ್ದೇಶವಿದೆ. ಈ ಯೋಜನೆಗೆ ಆದಷ್ಟು ಬೇಗ ಭೂಸ್ವಾದಿನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬಹಳ ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮಾತ್ರವಲ್ಲದೇ ಕಲ್ಯಾಣ ಕರ್ನಾಟಕಕ್ಕೆ ಸಂಪರ್ಕ ಸಾಧಿಸಬಲ್ಲ 56 ಕಿಲೋ ಮೀಟರ್ ಉದ್ದದ ಗದಗ-ಕುಷ್ಟಗಿ ಹೊಸ ರೈಲು ಮಾರ್ಗಕ್ಕಾಗಿ ಬೇಡಿಕೆ ಇದೆ. ಇದು ಗದಗ-ವಾಡಿ ರೈಲು ಮಾರ್ಗದ ಭಾಗವೇ ಆಗಿದೆ. ನರೇಗಲ್, ಗಜೇಂದ್ರಗಢ ಮೂಲಕ ಹಾದು ಹೋಗುವ ಈ ಮಾರ್ಗಕ್ಕೆ ತಕ್ಷಣ ಸಮೀಕ್ಷೆ ನಡೆಸಲು ಸೂಚಿಸಬೇಕು. ಯೋಜನೆ ಜಾರಿಗೆ ಕ್ರಮವಹಿಸುವಂತೆ ಕೋರಿದ್ದಾರೆ.
ಇಂದು ನವದೆಹಲಿಯಲ್ಲಿ ಕೇಂದ್ರ ರೇಲ್ವೆ ಸಚಿವರಾದ ಶ್ರೀ @AshwiniVaishnaw ಅವರನ್ನು ಭೇಟಿಯಾಗಿ ಈ ಕೆಳಕಂಡ ಬೇಡಿಕೆಯೊಳಗೊಂಡ ಮನವಿಯನ್ನು ಸಲ್ಲಿಸಿದೆನು.
— Basavaraj S Bommai (@BSBommai) February 11, 2026
1. ಶಿವಮೊಗ್ಗ – ರಾಣೆಬೆನ್ನೂರು ರೈಲು ಮಾರ್ಗ: (ಭೂಸ್ವಾಧೀನ ಸಮಸ್ಯೆಗಳ ಕಾರಣದಿಂದಾಗಿ ದೀರ್ಘಕಾಲದಿಂದ ಬಾಕಿಯಿರುವ ಈ ಯೋಜನೆಯ ಪೂರ್ಣಗೊಳಿಸುವಿಕೆ ವಿಳಂಬವಾಗುತ್ತಿದೆ. ಶೀಘ್ರವಾಗಿ ಕಾಮಗಾರಿ… pic.twitter.com/PD4y4JK5dv
ರೈಲು ಯೋಜನೆಯ ಪ್ರಯೋಜನಗಳು
ಈ ಮೇಲಿನ ಮೂರು ರೈಲು ಯೋಜನೆಗಳಿಂದ ಉತ್ತರ ಕರ್ನಾಟಕದ ಭಾಗದಲ್ಲಿ ರೈಲು ಸಾರಿಗೆ ಸುಧಾರಣೆ ಆದಂತಾಗುತ್ತದೆ. ವಿವಿಧ ಜಿಲ್ಲೆಗಳ ಮಧ್ಯ ಸುಗಮ ಸಂಪರ್ಕ ಸಾಧ್ಯವಾಗುತ್ತದೆ. ವ್ಯಾಪಾರ, ವಾಣಿಜ್ಯ, ಕೈಗಾರಿಕೆ, ಶಿಕ್ಷಣ, ಪ್ರವಾಸೋದ್ಯಮಕ್ಕೆ, ಗ್ರಾಮೀಣ ಭಾಗದ ಅಭಿವೃದ್ಧಿಗೂ ಈ ಯೋಜನೆಗಳು ಸಹಾಯವಾಗಲಿವೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ











Click it and Unblock the Notifications