ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು, ಅಕ್ಟೋಬರ್ 11: ಹಲವಾರು ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಆದ್ದರಿಂದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶಾಲೆಗಳಿಗೆ ಮಧ್ಯಂತರ ರಜೆ ಘೋಷಣೆ ಮಾಡಿದ್ದಾರೆ.

ಭಾನುವಾರ ಈ ಕುರಿತು ಅವರು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 12 ರಿಂದ ಮೂರು ವಾರಗಳ ಕಾಲ ಅಂದರೆ 30/10/2020 ವರೆಗೆ ಮಧ್ಯಂತರ ರಜೆ ಘೋಷಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

3 Week Midterm Holiday For All Schools

"ನನ್ನ ಪ್ರೀತಿಯ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕ ವರ್ಗದವರಿಗೆ ಮುಂಚಿತವಾಗಿ ದಸರಾ ಹಬ್ಬದ ಶುಭಾಶಯಗಳು" ಎಂದು ಬಿ. ಎಸ್. ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರದಿಂದಲೇ ಮೂರು ವಾರಗಳ ರಜೆ ಆರಂಭವಾಗಲಿದೆ.

ಕೋವಿಡ್ 19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಆರಂಭಿಸಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ ಎಂದು ಯಡಿಯೂರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಸರ್ಕಾರ ಶಾಲೆಗಳಿಗೆ ನೀಡಲಾಗುತ್ತಿದ್ದ ದಸರಾ ರಜೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಈಗ ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿಗುತ್ತಿರುವ ಹಿನ್ನಲೆಯಲ್ಲಿ ಮೂರು ವಾರಗಳ ರಜೆಯನ್ನು ನೀಡಲಾಗಿದೆ.

ಶನಿವಾರದ ವರದಿಯಂತೆ ಕರ್ನಾಟಕದಲ್ಲಿ 10517 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 700786. ರಾಜ್ಯದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 120929.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+