ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 11: ಹಲವಾರು ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿದ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಆದ್ದರಿಂದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶಾಲೆಗಳಿಗೆ ಮಧ್ಯಂತರ ರಜೆ ಘೋಷಣೆ ಮಾಡಿದ್ದಾರೆ.

ಭಾನುವಾರ ಈ ಕುರಿತು ಅವರು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 12 ರಿಂದ ಮೂರು ವಾರಗಳ ಕಾಲ ಅಂದರೆ 30/10/2020 ವರೆಗೆ ಮಧ್ಯಂತರ ರಜೆ ಘೋಷಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಶಾಲೆ ಆರಂಭಿಸುವ ಕುರಿತು ಸರ್ಕಾರದ ಸ್ಪಷ್ಟನೆ!ಕರ್ನಾಟಕದಲ್ಲಿ ಶಾಲೆ ಆರಂಭಿಸುವ ಕುರಿತು ಸರ್ಕಾರದ ಸ್ಪಷ್ಟನೆ!

3 Week Midterm Holiday For All Schools

"ನನ್ನ ಪ್ರೀತಿಯ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕ ವರ್ಗದವರಿಗೆ ಮುಂಚಿತವಾಗಿ ದಸರಾ ಹಬ್ಬದ ಶುಭಾಶಯಗಳು" ಎಂದು ಬಿ. ಎಸ್. ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರದಿಂದಲೇ ಮೂರು ವಾರಗಳ ರಜೆ ಆರಂಭವಾಗಲಿದೆ.

ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!

ಕೋವಿಡ್ 19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಆರಂಭಿಸಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ ಎಂದು ಯಡಿಯೂರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾಲಕರೇ ಗಮನಿಸಿ: ಶಾಲೆ ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆಯ ನಿರ್ಧಾರ ಇದು!ಪಾಲಕರೇ ಗಮನಿಸಿ: ಶಾಲೆ ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆಯ ನಿರ್ಧಾರ ಇದು!

ಈ ಹಿಂದೆ ಸರ್ಕಾರ ಶಾಲೆಗಳಿಗೆ ನೀಡಲಾಗುತ್ತಿದ್ದ ದಸರಾ ರಜೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಈಗ ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿಗುತ್ತಿರುವ ಹಿನ್ನಲೆಯಲ್ಲಿ ಮೂರು ವಾರಗಳ ರಜೆಯನ್ನು ನೀಡಲಾಗಿದೆ.

Recommended Video

ಮನೆ ಮುಂದೆ ಗಾಂಜಾ ಗಿಡ, ಖತರ್ನಾಕ್ ಕಳ್ಳರು | Oneindia Kannada

ಶನಿವಾರದ ವರದಿಯಂತೆ ಕರ್ನಾಟಕದಲ್ಲಿ 10517 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 700786. ರಾಜ್ಯದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 120929.

English summary
Karnataka Chief Minister B. S. Yediyurappa directed officials to order 3 week midterm holiday for all schools. Holidays starting from October 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X