ರಾಜ್ಯದ ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್ : ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು, ಏಪ್ರಿಲ್ 05: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಹಾಗೂ ಜೂನ್ ಮಾಹೇಯಲ್ಲಿ ಶೇ.20 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು, ಚಹಾ, ಕಾಫಿ , ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು ಎಂದು ಸಚಿವರು ಸಲಹೆ ಮಾಡಿದ್ದಾರೆ.

ಸಂಬಂಶಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲು ಸಚಿವ ಪ್ರಿಯಾಂಕ್ ಖರ್ಗೆ ಅವರು ನಿರ್ದೇಶನ ನೀಡಿದ್ದಾರೆ.
ವಿವಿಧ ಇಲಾಖೆಗಳಲ್ಲಿರುವ ಎಲ್ಲಾ ಪರೀಕ್ಷಾ ಪ್ರಾಧಿಕಾರಗಳ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ಅಧಿನಿಯಮ, 2023ರ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಎಲ್ಲಾ ನೇಮಕಾತಿ ಮತ್ತು ಪರೀಕ್ಷಾ ಪ್ರಾಧಿಕಾರಗಳು ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಅನುಚ್ಛೇದ-371-ಜೆ ಅನುಷ್ಟಾನ ಕುರಿತಾದ ಸಚಿವ ಸಂಪುಟ ಉಪ ಸಮಿತಿಯ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಅಧಿನಿಯಮದ ನಿಬಂಧನೆಗಳು ಮತ್ತು ಅವುಗಳನ್ನು ಪಾಲಿಸುವ ಮಹತ್ವದ ಬಗ್ಗೆ ಸಿಬ್ಬಂದಿ ಮತ್ತು ಪರೀಕ್ಷಾರ್ಥಿಗಳು ಸೇರಿದಂತೆ ಎಲ್ಲಾ ಪಾಲುದಾರರಿಗೆ ಅರಿವು ಮೂಡಿಸಲು ಅಭಿಯಾನ ಪ್ರಾರಂಭಿಸುವುದು, ಅಧಿನಿಯಮದ ನಿಬಂಧನೆಗಳಿಗೆ ಹೊಂದಿಕೊಂಡಂತೆ ಮೇಲ್ವಿಚಾರಣೆ ಮಾಡಲು, ವರದಿ ಮಾಡಲು ಸ್ಪಷ್ಟವಾದ ಪ್ರಮಾಣಿತ ಕಾರ್ಯವಿಧಾನ ಮಾರ್ಗಸೂಚಿಗಳನ್ನು ಹೊರಡಿಸುವುದು,ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಾಲ-ಕಾಲಕ್ಕೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಬಂಧದಲ್ಲಿ ಕ್ರಮ ಆಗಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಪರೀಕ್ಷೆಗಳ ಸಮಯದಲ್ಲಿ ಅಕ್ರಮಗಳನ್ನು ಪತ್ತೆಹಚ್ಚಲು ಮತ್ತು ತಡೆಯಲು ಬಲವಾದ ಮೇಲ್ವಿಚಾರಣಾ ವ್ಯವಸ್ಥೆಗಳನ್ನು ಸ್ಥಾಪಿಸುವುದು, ಶಂಕಿತ ಉಲ್ಲಂಘನೆಗಳನ್ನು ತ್ವರಿತವಾಗಿ ವರದಿ ಮಾಡಲು ಹಾಗೂ ಎಲ್ಲಾ ವರದಿಗಳನ್ನು ಗಂಭೀರವಾಗಿ ಪರಿಗಣಿಸುವುದು, ಪ್ರತಿ ಇಲಾಖೆಯೊಳಗಿನ ಪರೀಕ್ಷಾ ಪ್ರಕ್ರಿಯೆಗಳ ಕುರಿತು ಕಾಲ-ಕಾಲಕ್ಕೆ ಮೌಲ್ಯಮಾಪನ ಮಾಡಿ ವಿಮರ್ಶಿಸುವ ಪ್ರಕ್ರಿಯೆಗಳನ್ನು ಜಾರಿಗೊಳಿಸಲು ಪ್ರಾಧಿಕಾರಿಗಳಿಗೆ ಸೂಸಿಸಬೇಕೆಂದು ಸಚಿವರು ಹೇಳಿದ್ದಾರೆ.

ಅಧಿನಿಯಮದ ನಿಬಂಧನೆಗಳನ್ನು ಜಾರಿಗೊಳಿಸುವಲ್ಲಿ ಪೊಲೀಸ್ ಇಲಾಖೆಯು ಪ್ರಮುಖ ಪಾತ್ರ ವಹಿಸಬೇಕಾಗಿರುತ್ತದೆ ಎಂದಿರುವ ಪ್ರಿಯಾಂಕ್ ಖರ್ಗೆ ಪರೀಕ್ಷಾ ಕೇಂದ್ರಗಳಲ್ಲಿ ಸಮನ್ವಯ ಸಾಧಿಸಿಸಲು ಕಣ್ಗಾವಲು ಮತ್ತು ಮೇಲ್ವಿಚಾರಣೆಗೆ ಸಹಕರಿಸಲು ಹಾಗೂ ಯಾವುದೇ ವರದಿಯಾದ ಉಲ್ಲಂಘನೆಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ಅಪರಾಧಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಬೇಕು ಎಂದೂ ಹೇಳಿದ್ದಾರೆ.
ಅಧಿನಿಯಮವು ಫೆಬ್ರವರಿ 27, 2025ರಿಂದ ಜಾರಿಗೆ ಬಂದಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯಲು ಸ್ಥಾಪಿಸಲಾಗಿದ್ದು, ಇದು ಸಾರ್ವಜನಿಕ ನಂಬಿಕೆಯನ್ನು ಕಾಪಾಡಿಕೊಳ್ಳಲು ಮತ್ತು ಎಲ್ಲಾ ಅಭ್ಯರ್ಥಿಗಳಿಗೆ ಸಮಾನ ಅವಕಾಶಗಳನ್ನು ಒದಗಿಸಲು ನಿರ್ಣಾಯಕವಾಗಲಿದೆ ಎಂದು ಸಚಿವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಪತ್ರದಲ್ಲಿ ವಿವರಿಸಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ, ರಾಜ್ಯ ಸರ್ಕಾರವು ನೇಮಕಾತಿ ಪ್ರಕ್ರಿಯೆಗಳಲ್ಲಿ ಗಮನಾರ್ಹವಾದ ಬದಲಾವಣೆಯನ್ನು ತರಬಹುದು ಮತ್ತು ಎಲ್ಲಾ ಅಭ್ಯರ್ಥಿಗಳನ್ನು ಅವರ ಅರ್ಹತೆಯ ಆಧಾರದ ಮೇಲೆ ನ್ಯಾಯಯುತವಾಗಿ ಮೌಲ್ಯಮಾಪನ ನಡೆಯುತ್ತದೆಂದು ವಿಶ್ವಾಸ ತಮಗೆ ಇರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿಸಿದ್ದಾರೆ.












Click it and Unblock the Notifications