300 ಎಕರೆ ಅರಣ್ಯ ಭೂಮಿ ಮರಳಿ ಅರಣ್ಯ ಇಲಾಖೆ ವಶಕ್ಕೆ: ಈಶ್ವರ ಖಂಡ್ರೆ
ಬೆಂಗಳೂರು, ಜುಲೈ 03: ಇತ್ತೀಚೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 4000 ಕೋಟಿ ರೂಪಾಯಿ ಮೌಲ್ಯದ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗ ವಶಕ್ಕೆ ಪಡೆಯಲಾಗಿತ್ತು. ಇಂತಹ ಅಕ್ರಮ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಇತರ ಜಿಲ್ಲೆಗಳಿಗೂ ಹಬ್ಬಿದೆ. ಕಲ್ಪತರು ನಾಡು ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲೂ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಗುಳುಂ ಮಾಡಲು ಮುಂದಾಗಿದ್ದರು. ಅರಣ್ಯ ಇಲಾಖೆ ಕಾರ್ಯಾಚರಣೆಯಿಂದ ಅಷ್ಟು ಆಸ್ತಿ ಇಲಾಖೆಗೆ ಮರಳಿ ವಶಕ್ಕೆ ಪಡೆಯಲಾಗಿದೆ.
ಅರಣ್ಯ ಭೂಮಿ ಅಕ್ರಮ ಒತ್ತುವರಿ ಕುರಿತು ಖುದ್ದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೇ ಮಾಹಿತಿ ನೀಡಿದ್ದಾರೆ.
300 ಎಕರೆ ಅರಣ್ಯ ಭೂಮಿ ಉಳಿವು ಬುಕ್ಕಾಪಟ್ಟಣ ವನ್ಯಜೀವಿಧಾಮದಲ್ಲಿ ಯಶಸ್ವಿ ತೆರವು ಕಾರ್ಯಾಚರಣೆ ಗುರುವಾರ ಮಾಡಲಾಯಿತು ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು ಪಕ್ಕದ ತುಮಕೂರು ಜಿಲ್ಲೆಯ ತಿಪಟೂರು ಉಪ ವಿಭಾಗದ ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮ ವ್ಯಾಪ್ತಿಯ ಮುತ್ತುಗದಹಳ್ಳಿ ಮೀಸಲು ಅರಣ್ಯದಲ್ಲಿ ಇಂದು 300 ಎಕರೆ ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಅಕ್ರಮದ ವಿರುದ್ಧ ಸಮರ ಸಾರಲಾಗಿದೆ ಎಂದು ತಿಳಿಸಿದರು.
ಈ ಭೂಮಿಯು ಮೈಸೂರು ಮಹಾರಾಜರಿಂದ 1926ರಲ್ಲಿ ಅರಣ್ಯ ಇಲಾಖೆಗೆ ನೀಡಲಾಗಿದ್ದು, ನಂತರದ ವರ್ಷಗಳಲ್ಲಿ ಕೆಲವು ಮಂದಿ ಅಕ್ರಮವಾಗಿ ಮಂಜೂರು ಮಾಡಿಕೊಂಡು, ಕೆಲವು ಮಂದಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದರು. ಪ್ರಕರಣ ರಾಜ್ಯ ಹೈಕೋರ್ಟ್ ಮೆಟ್ಟಲೇರಿ ಅರಣ್ಯವಾಗಿ ಉಳಿಸಲು ಆದೇಶವಾಗಿತ್ತು. ಇದೀಗ ಭೂಮಿ ಅರಣ್ಯ ಇಲಾಖೆಯ ಹೆಸರಿಗೆ ನೊಂದಾಯಿತವಾಗಿದೆ.
ಹಾಸನ-ತುಮಕೂರು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ, ಪೊಲೀಸ್ ಇಲಾಖೆಯ ಬೆಂಬಲದಿಂದ ಭೂಮಿಯನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅರಣ್ಯ ಸಂರಕ್ಷಣೆಯ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಕಾರ್ಯಾಚರಣೆಯನ್ನು ಬಣ್ಣಿಸಿದ್ದಾರೆ.
ಜುಲೈ 5ಕ್ಕೆ 25 ಲಕ್ಷ ಸಸಿ ನೆಡುವ 'ವನಮಹೋತ್ಸವ..'
ಇತ್ತೀಚೆಗೆ ಬೆಂಗಳೂರು ಭಾಗದಲ್ಲೇ ಬೃಹತ್ ಅರಣ್ಯ ಅಕ್ರಮ ತೆರವುಗೊಳಿಸಿದ್ದ ಅರಣ್ಯ ಇಲಾಕೆ ಹಸಿರು ಹೆಚ್ಚಿಸಲು ಕ್ರಮ ಕೈಗೊಂಡಿದೆ. ಹಸಿರು ಕಲ್ಯಾಣ ಕರ್ನಾಟಕ ಯೋಜನೆಯಡಿ 25 ಲಕ್ಷ ಸಸಿ ನೆಡುವ ಬೃಹತ್ ವನಮಹೋತ್ಸವ ಆಚರಣೆಗೆ ಮುಂದಾಗಿದೆ. ಈ ವನಮಹೋತ್ಸವ ಜುಲೈ 5ರಂದು ನಡೆಯಲಿದ್ದು, ರಾಜ್ಯಸಭಾ ಪ್ರತಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ.
ಕಲಬುರಗಿ ನಗರ ಹಾಗೂ ಜಿಲ್ಲೆಯ ಹಸಿರೀಕರಣಕ್ಕಾಗಿ ಬೃಹತ್ ಪ್ರಮಾಣದಲ್ಲಿ ಗಿಡಗಳನ್ನು ನೆಡುವ "ವನಮಹೋತ್ಸವ" ಕಾರ್ಯಕ್ರಮಕ್ಕೆ ಇದಾಗಿದೆ ಎಂದು ಸಚಿವರು ಬೆಂಗಳೂರಿನಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿ ಬಳಿಕೆ ಮಾಹಿತಿ ನೀಡಿದರು.
ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಉಷ್ಣತೆಯನ್ನು ತಗ್ಗಿಸಲು ಹಾಗೂ ಪರಿಸರವನ್ನು ರಕ್ಷಿಸಲು ಹಸಿರುಕರಣ ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಈ ಬೃಹತ್ ವನಮಹೋತ್ಸವ ಕಾರ್ಯಕ್ರಮ ಹಸಿರುಕರಣ ತ್ವರಿತಗೊಳಿಸಲು ಪರಿಣಾಮಕಾರಿ ಹೆಜ್ಜೆಯಾಗಿ ಹಾಗೂ ಪರಿಸರ ಸಂರಕ್ಷಣೆಗೆ ಮಹತ್ವದ ಪಾತ್ರವನ್ನೂ ವಹಿಸಲಿದೆ ಎಂದು ಅವರು ತಿಳಿಸಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications