ಎಚ್ಚರಿಕೆ: ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸಾವಿನ ಸಂಖ್ಯೆ!
ಬೆಂಗಳೂರು, ಜುಲೈ 06: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸೋಮವಾರ 67 ಇದ್ದ ಸಾವಿನ ಸಂಖ್ಯೆ ಮಂಗಳವಾರ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಶೇಕಡಾವಾರು ಸಾವಿನ ಸಂಖ್ಯೆ ಪ್ರಮಾಣ ಶೇ.2.96ರಷ್ಟಿದೆ. ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.2.65ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ 67 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಈವರೆಗೂ 35526 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 3104 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4992 ಸೋಂಕಿತರು ಗುಣಮುಖರಾಗಿದ್ದಾರೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,59,595ಕ್ಕೆ ಏರಿಕೆಯಾಗಿದೆ. ಈವರೆಗೂ 27,84,030 ಸೋಂಕಿತರು ಗುಣಮುಖರಾಗಿದ್ದು. 40,016 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 715 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,16,896ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 15 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,690ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 14,232 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ತಪಾಸಣೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 33,808 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 83,104 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,16,912 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 64,25,472 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 2,87,26,659 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,51,52,131 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಒಟ್ಟು 3104 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 5, ಬಳ್ಳಾರಿ 24, ಬೆಳಗಾವಿ 157, ಬೆಂಗಳೂರು ಗ್ರಾಮಾಂತರ 67, ಬೆಂಗಳೂರು 715, ಬೀದರ್ 6, ಚಾಮರಾಜನಗರ 68, ಚಿಕ್ಕಬಳ್ಳಾಪುರ 29, ಚಿಕ್ಕಮಗಳೂರು 109, ಚಿತ್ರದುರ್ಗ 64, ದಕ್ಷಿಣ ಕನ್ನಡ 216, ದಾವಣಗೆರೆ 60, ಧಾರವಾಡ 29, ಗದಗ 7, ಹಾಸನ 270, ಹಾವೇರಿ 14, ಕಲಬುರಗಿ 15, ಕೊಡಗು 140, ಕೋಲಾರ 108, ಕೊಪ್ಪಳ 15, ಮಂಡ್ಯ 113, ಮೈಸೂರು 389, ರಾಯಚೂರು 4, ರಾಮನಗರ 32, ಶಿವಮೊಗ್ಗ 119, ತುಮಕೂರು 138, ಉಡುಪಿ 114, ಉತ್ತರ ಕನ್ನಡ 72, ವಿಜಯಪುರ 2, ಯಾದಗಿರಿ 3 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Recommended Video

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
ರಾಜ್ಯದಲ್ಲಿ ಈವರೆಗೂ 7,53,611 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,10,831 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 8,52,972 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,60,817 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,11,05,056 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 33,51,927 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,01,27,282 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 42,94,746 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications