ಕರ್ನಾಟಕದಲ್ಲಿ 3,130 ಹೊಸ ಕೋವಿಡ್ ಪ್ರಕರಣ ದಾಖಲು
ಬೆಂಗಳೂರು, ಅಕ್ಟೋಬರ್ 26: ಕರ್ನಾಟಕದಲ್ಲಿ 3,130 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಸತತ ಮೂರು ದಿನಗಳಿಂದ ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ 5 ಸಾವಿರಕ್ಕಿಂತ ಕಡಿಮೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 805947ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಸೋಮವಾರ 42 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಂಗಳೂರು ನಗರದಲ್ಲಿಯೇ 20 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 10,947 ಆಗಿದೆ.

ಅಕ್ಟೋಬರ್ 26ರಂದು 8,715 ಜನರು ರಾಜ್ಯದಲ್ಲಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 7,19,558. 942 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕದಲ್ಲಿನ ಸೋಮವಾರದ ಸಕ್ರಿಯ ಪ್ರಕರಣಗಳ ಸಂಖ್ಯೆ 75,423. ಅಕ್ಟೋಬರ್ 24ರಂದು 86,749, ಅಕ್ಟೋಬರ್ 25ರಂದು 81,050 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದ್ದವು. ಹೊಸ ಪ್ರಕರಣ, ಸಕ್ರಿಯ ಪ್ರಕರಣ ರಾಜ್ಯದಲ್ಲಿ ಕಡಿಮೆಯಾಗುತ್ತಿದೆ.
ಸೋಮವಾರ 10,955 ಆಂಟಿಜೆನ್ ಪರೀಕ್ಷೆ, 54,937 ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಮಾಡಲಾಗಿದೆ. ಒಟ್ಟು 65,892 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ಮಾಹಿತಿ ನೀಡಲಾಗಿದೆ.
ಬೆಂಗಳೂರು; ಬೆಂಗಳೂರು ನಗರದಲ್ಲಿ ಸೋಮವಾರ 1603 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,27,376ಕ್ಕೆ ಏರಿಕೆಯಾಗಿದೆ.
ಸೋಮವಾರ ದಕ್ಷಿಣ ಕನ್ನಡದಲ್ಲಿ 153, ದಾವಣಗೆರೆಯಲ್ಲಿ 124, ಮೈಸೂರಿನಲ್ಲಿ 139, ಚಿತ್ರದುರ್ಗದಲ್ಲಿ 86, ಹಾಸನದಲ್ಲಿ 98, ವಿಜಯಪುರದಲ್ಲಿ 63 ಹೊಸ ಪ್ರಕರಣಗಳು ದಾಖಲಾಗಿವೆ.











Click it and Unblock the Notifications