ಕನ್ನಡಿಗರೇ ಖುಷಿ ಆಗದಿರಿ: ಕೊರೊನಾ ಕಡಿಮೆ ಹಿಂದಿನ ಕಾರಣ ಇಲ್ಲಿದೆ ಓದಿ!

ಬೆಂಗಳೂರು, ಮೇ 16: ಕರ್ನಾಟಕದಲ್ಲಿ ಅಚ್ಚರಿ ಹುಟ್ಟಿಸುವ ಮಟ್ಟಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಸಡನ್ ಇಳಿಕೆಯಾಗಿದೆ. 40,000ಕ್ಕಿಂತ ಹೆಚ್ಚಾಗಿದ್ದ ಹೊಸ ಪ್ರಕರಣಗಳ ಸಂಖ್ಯೆ 32,000ಕ್ಕಿಂತ ಕಡಿಮೆಯಾಗಿದೆ. ಇದರ ಹಿಂದಿನ ಅಸಲಿ ಕಥೆ ಬೇರೇಯೇ ಇದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 31531 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ ಕೊವಿಡ್-19 ಸೋಂಕಿನಿಂದ 403 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 36475 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 22,03,462 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 15,81,457 ಸೋಂಕಿತರು ಗುಣಮುಖರಾಗಿದ್ದು, 21837ಕ್ಕೆ ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 6,00,147 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

31531 New Coronavirus Cases Reported in Karnataka Today, State Tally Rise to 2203462

ಕೊವಿಡ್-19 ಪರೀಕ್ಷೆ ಸಂಖ್ಯೆಯಲ್ಲಿ ಇಳಿಮುಖ

ಕೊವಿಡ್-19 ಪರೀಕ್ಷೆ ಸಂಖ್ಯೆಯಲ್ಲಿ ಇಳಿಮುಖ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಹೆಚ್ಚುತ್ತಿದೆ ಎಂದು ನಿರಾತಂಕದಿಂದ ಇರುವಂತಿಲ್ಲ. ರಾಜ್ಯದಲ್ಲಿ ಕೊವಿಡ್-19 ಸಂಖ್ಯೆ ಇಳಿಮುಖವಾಗುವುದರ ಹಿಂದೆ ಬೇರೆಯದ್ದೇ ಕಾರಣ ಅಡಗಿದೆ. ಕಳೆದ 24 ಗಂಟೆಗಳಲ್ಲಿ 9713 ಜನರಿಗೆ ರಾಪಿಡ್ ಆಂಟಿಜೆನಿಕ್ ಪರೀಕ್ಷೆ ನಡೆಸಲಾಗಿದೆ. 1,03,506 ಜನರಿಗೆ RT-PCR ತಪಾಸಣೆ ನಡೆಸಲಾಗಿದ್ದು, ಒಂದು ದಿನದಲ್ಲಿ ಒಟ್ಟು1,13,219 ಮಂದಿಗೆ ಮಾತ್ರ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ 9,000ಕ್ಕಿಂತ ಕಡಿಮೆ ಕೊರೊನಾ ಕೇಸ್

ಬೆಂಗಳೂರಿನಲ್ಲಿ 9,000ಕ್ಕಿಂತ ಕಡಿಮೆ ಕೊರೊನಾ ಕೇಸ್

ಪ್ರತಿನಿತ್ಯ 15000ಕ್ಕಿಂತಲೂ ಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳನ್ನು ವರದಿ ಮಾಡುತ್ತಿದ್ದ ಬೆಂಗಳೂರಿನಲ್ಲಿ 10,000ಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಕೇವಲ 8344 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 10,51,058ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 143 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 9483ಕ್ಕೆ ಏರಿಕೆಯಾಗಿದೆ. 3,61,380 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?

ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?

ರಾಜ್ಯದಲ್ಲಿ ಒಟ್ಟು 31531 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 431, ಬಳ್ಳಾರಿ 1729, ಬೆಳಗಾವಿ 1762, ಬೆಂಗಳೂರು ಗ್ರಾಮಾಂತರ 1082, ಬೆಂಗಳೂರು 8344, ಬೀದರ್ 129, ಚಾಮರಾಜನಗರ 440, ಚಿಕ್ಕಬಳ್ಳಾಪುರ 558, ಚಿಕ್ಕಮಗಳೂರು 963, ಚಿತ್ರದುರ್ಗ 640, ದಕ್ಷಿಣ ಕನ್ನಡ 957, ದಾವಣಗೆರೆ 1155, ಧಾರವಾಡ 937, ಗದಗ 453, ಹಾಸನ 1182, ಹಾವೇರಿ 184, ಕಲಬುರಗಿ 645, ಕೊಡಗು 191, ಕೋಲಾರ 569, ಕೊಪ್ಪಳ 617, ಮಂಡ್ಯ 709, ಮೈಸೂರು 1811, ರಾಯಚೂರು 464, ರಾಮನಗರ 403, ಶಿವಮೊಗ್ಗ 643, ತುಮಕೂರು 2138, ಉಡುಪಿ 745, ಉತ್ತರ ಕನ್ನಡ 1087, ವಿಜಯಪುರ 330, ಯಾದಗಿರಿ 233 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    ಪಾಕಿಸ್ತಾನ ಲೀಗನ್ನು (PSL) IPL ಗೆ ಹೋಲಿಸಬೇಡಿ | Oneindia Kannada
    ಕರ್ನಾಟಕದಲ್ಲಿ ಕೊವಿಡ್-19 ಲಸಿಕೆ ವಿತರಣೆ

    ಕರ್ನಾಟಕದಲ್ಲಿ ಕೊವಿಡ್-19 ಲಸಿಕೆ ವಿತರಣೆ

    ಕರ್ನಾಟಕದಲ್ಲಿ ಈವರೆಗೂ 6,98,304 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,60,437 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 4,87,698 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,94,217 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 73,88,710 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 18,44,425 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 86,89,064 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 24,99,079 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+