ಏ.23ರ ಚುನಾವಣೆ: ನಾಮಪತ್ರ ಹಿಂಪಡೆಯಲು ಏ.8 ಕೊನೆಯ ದಿನ

ಬೆಂಗಳೂರು, ಏ.5: ಏ.23ರಂದು ಎರಡನೇ ಹಂತದಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಚುನಾವಣೆ ಸಲ್ಲಿಸಿದ್ದ ನಾಮಪತ್ರ ಹಿಂಪಡೆಯಲು ಏ.8 ಅಂತಿಮ ದಿನವಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಆಯಾ ಲೋಕಸಭೆ ಕ್ಷೇತ್ರಗಳ ಚುನಾವಣಾಧಿಕಾರಿಗಳು ನಿನ್ನೆಯವರೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ. 2ನೇ ಹಂತದಲ್ಲಿ 317 ಅಭ್ಯರ್ಥಿಗಳು 457 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ರಾಜ್ಯದ ಸಂಸದರಲ್ಲಿ ಯಾರ ವಿರುದ್ಧ ಎಷ್ಟು ಕ್ರಿಮಿನಲ್ ಪ್ರಕರಣಗಳಿವೆ?

ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಪರಿಶೀಲನೆ ಇಂದು ನಡೆದಿದ್ದು, ಕೆಲವು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದೆ. ನಾಮಪತ್ರ ಕ್ರಮಬದ್ಧವಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಸಂಜೆ ವೇಳೆಗೆ ಪ್ರಕಟಿಸುವ ಸಾಧ್ಯತೆ ಇದೆ.

317 Candidates File Nominations For Second Phase Of Polling In Karnataka

ಈ ಪೈಕಿ 303 ಪುರುಷ ಹಾಗೂ 14 ಮಹಿಳಾ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಎರಡು ಹಂತದ ನಾಮಪತ್ರ ಸಲ್ಲಿಕೆ ಮುಗಿದಿದ್ದು , ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ, ಬಿಜೆಪಿ 27 ಕ್ಷೇತ್ರಗಳಲ್ಲಿ, ಜೆಡಿಎಸ್ 7 ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಕ್ಷೇತ್ರಗಳನ್ನು ಹಂಚಿಕೊಂಡು ಅಭ್ಯರ್ಥಿಗಳನ್ನುಕಣಕ್ಕಿಳಿಸಿವೆ.

ಏ.23ರಂದು ಮತದಾನ ನಡೆಯುವ ಎರಡನೇ ಹಂತದ ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬೀದರ್, ಬಳ್ಳಾರಿ, ಕಲಬುರಗಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ರಾಯಚೂರು, ಕೊಪ್ಪಳ, ವಿಜಯಪುರ, ಹಾವೇರಿ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲೂ ಚುನಾವಣೆ ಕಾವು ಏರತೊಡಗಿದ್ದು, ಅಬ್ಬರದ ಪ್ರಚಾರ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+