ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕರ್ನಾಟಕದಲ್ಲಿ 8ಕ್ಕೆ ಏರಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ

|
Google Oneindia Kannada News

ಬೆಂಗಳೂರು, ಮಾರ್ಚ್.16: ವಿಶ್ವವಷ್ಟೇ ಅಲ್ಲ ಕೊರೊನಾ ವೈರಸ್ ಎಂದರೆ ಭಾರತವೂ ಬೆಚ್ಚಿ ಬೀಳುವಂತಾ ಸನ್ನಿವೇಶ ನಿರ್ಮಾಣವಾಗುತ್ತಿದೆ. ದೇಶವಷ್ಟೇ ಅಲ್ಲ ಕರ್ನಾಟಕದಲ್ಲೂ ದಿನೇ ದಿನೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರುಮುಖವಾಗಿ ಸಾಗುತ್ತಿದ್ದು, ಡೆಡ್ಲಿ ವೈರಸ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಸೋಮವಾರ ಬೆಂಗಳೂರಿನಲ್ಲಿ 32 ವರ್ಷದ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು ತಗಲಿರುವ ಬಗ್ಗೆ ವರದಿ ಬಂದಿದೆ. ಅಮೆರಿಕಾದಿಂದ ಆಗಮಿಸಿದ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದ ವ್ಯಕ್ತಿಯಲ್ಲಿ ಸೋಂಕು ಇರುವುದು ವೈದ್ಯಕೀಯ ತಪಾಸಣೆ ವೇಳ ದೃಢಪಟ್ಟಿದೆ.

ಕೊರೊನಾ ಮುಕ್ತ ಭಾರತ; ಯಾವ ಸ್ಯಾನಿಟೈಸರ್ ಬಳಕೆ ಸೂಕ್ತ?ಕೊರೊನಾ ಮುಕ್ತ ಭಾರತ; ಯಾವ ಸ್ಯಾನಿಟೈಸರ್ ಬಳಕೆ ಸೂಕ್ತ?

ಅಮೆರಿಕಾದಿಂದ ಬಂದಿದ್ದ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗೆ ಸೋಂಕು ತಗಲಿರುವ ಅನುಮಾನದ ಮೇಲೆ ಗೃಹ ಬಂಧನದಲ್ಲಿ ಇರಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಈ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕಿತ ಲಕ್ಷಣಗಳು ಕಂಡು ಬಂದವು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ವ್ಯಕ್ತಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

32-Years Old Person Also Infected From Deadly Coronavirus In Bangalore

ಸೋಂಕಿತ ವ್ಯಕ್ತಿಗೆ ಇಬ್ಬರ ಜೊತೆ ಪ್ರಾಥಮಿಕ ಸಂಪರ್ಕ:

ಸೋಮವಾರ ಸೋಂಕು ಕಾಣಿಸಿಕೊಂಡ 32 ವರ್ಷದ ವ್ಯಕ್ತಿಯು ಇಬ್ಬರ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಬಗ್ಗೆ ತಿಳಿದು ಬಂದಿದೆ. ಈ ಹಿನ್ನೆಲೆ ಸೋಂಕಿತನ ವ್ಯಕ್ತಿಯನ್ನು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇನ್ನು, ಸೋಂಕಿತನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿರುವ ಇಬ್ಬರನ್ನು ಪ್ರತ್ಯೇಕಿಸಿ ಇಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

English summary
32-Years Old Person Also Infected From Deadly Coronavirus In Bangalore. Karnataka Total Cases Rise To 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X