Breaking News: ಕರ್ನಾಟಕದಲ್ಲಿ ತಗ್ಗಿದ ಕೊವಿಡ್-19 ಸಕ್ರಿಯ ಪ್ರಕರಣ
ಬೆಂಗಳೂರು, ಜುಲೈ 01: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕ್ರಮೇಣ ತಗ್ಗಿದೆ. ರಾಜ್ಯದಲ್ಲಿ ಕೊವಿಡ್-19 ಸಕ್ರಿಯ ಪ್ರಕರಣಗಳ ಶೇಕಡಾವಾರು ಪ್ರಮಾಣ 2.05ರಷ್ಟಿದ್ದು, ಸಾವಿನ ಪ್ರಮಾಣ ಶೇ.2.93ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ 3203 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 94 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, 14302 ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,47,013ಕ್ಕೆ ಏರಿಕೆಯಾಗಿದೆ. ಈವರೆಗೂ 35134 ಜನರು ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟಿದ್ದು, 27,46,544 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 65,312 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಒಟ್ಟು 3203 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 4, ಬಳ್ಳಾರಿ 34, ಬೆಳಗಾವಿ 114, ಬೆಂಗಳೂರು ಗ್ರಾಮಾಂತರ 75, ಬೆಂಗಳೂರು 676, ಬೀದರ್ 3, ಚಾಮರಾಜನಗರ 75, ಚಿಕ್ಕಬಳ್ಳಾಪುರ 40, ಚಿಕ್ಕಮಗಳೂರು 98, ಚಿತ್ರದುರ್ಗ 41, ದಕ್ಷಿಣ ಕನ್ನಡ 285, ದಾವಣಗೆರೆ 66, ಧಾರವಾಡ 27, ಗದಗ 15, ಹಾಸನ 281, ಹಾವೇರಿ 18, ಕಲಬುರಗಿ 21, ಕೊಡಗು 167, ಕೋಲಾರ 96, ಕೊಪ್ಪಳ 16, ಮಂಡ್ಯ 97, ಮೈಸೂರು 366, ರಾಯಚೂರು 6, ರಾಮನಗರ 9, ಶಿವಮೊಗ್ಗ 194, ತುಮಕೂರು 157, ಉಡುಪಿ 146, ಉತ್ತರ ಕನ್ನಡ 59, ವಿಜಯಪುರ 11, ಯಾದಗಿರಿ 6 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications