ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು 5934ಕ್ಕೆ ಇಳಿಕೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 8: ರಾಜ್ಯದಲ್ಲಿ ಇಂದು 328 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 350 ಮಂದಿ ಸೋಂಕಿತರು ಬಿಡುಗಡೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮೂವರು ಸೋಂಕಿತರು ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಇದುವರೆಗೂ ಒಟ್ಟು 9,42,846 ಪ್ರಕರಣಗಳು ದಾಖಲಾಗಿವೆ. ಒಟ್ಟು 12,239 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 9,24,654 ಮಂದಿ ಇದುವರೆಗೂ ರೋಗದಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಸಕ್ರಿಯ ಪ್ರಕರಣಗಳು 5934ಕ್ಕೆ ಇಳಿಕೆಯಾಗಿದೆ.

ಕರ್ನಾಟಕ; ಕೋವಿಡ್ ಲಸಿಕೆ ಪಡೆದ ಜಿಲ್ಲಾಧಿಕಾರಿಗಳು, ಎಸ್ಪಿಕರ್ನಾಟಕ; ಕೋವಿಡ್ ಲಸಿಕೆ ಪಡೆದ ಜಿಲ್ಲಾಧಿಕಾರಿಗಳು, ಎಸ್ಪಿ

ಬೆಂಗಳೂರಿನಲ್ಲಿ 127 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ 48, ದಕ್ಷಿಣ ಕನ್ನಡದಲ್ಲಿ 40 ಪ್ರಕರಣಗಳು ವರದಿಯಾಗಿವೆ. ಬಾಗಲಕೋಟೆ, ದಾವಣಗೆರೆ, ರಾಮನಗರ ಮತ್ತು ಯಾದಗಿರಿ ಶೂನ್ಯ ಪ್ರಕರಣಗಳ ಜಿಲ್ಲೆಗಳಾಗಿವೆ. ಗದಗ, ಕೊಡಗು, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿವೆ. ಬಳ್ಳಾರಿ 3, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ, ಬೀದರ್, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ 2 ಪ್ರಕರಣಗಳು ವರದಿಯಾಗಿವೆ. 143 ಸೋಂಕಿತರು ಐಸಿಯುದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

328 New Coronavirus Cases Reported And 350 Discharged In Karnataka

ರಾಜ್ಯದಲ್ಲಿ ಇಂದು 107,852 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಆದರೆ 25,121 ಜನರಿಗೆ ಮಾತ್ರ ಅಂದರೆ ಕೇವಲ ಶೇ 23ರಷ್ಟು ಮಂದಿಗೆ ಲಸಿಕೆ ನೀಡುವುದು ಸಾಧ್ಯವಾಗಿದೆ. ರಾಜ್ಯದಲ್ಲಿ ಇದುವರೆಗೂ 21 ಜನರಿಗೆ ಬ್ರಿಟನ್ ರೂಪಾಂತರಿ ವೈರಸ್ ಇರುವುದು ಪತ್ತೆಯಾಗಿದೆ.

Recommended Video

ಕಂದಾಯ,ಗ್ರಾಮೀಣಾಭಿವೃದ್ಧಿ ಸಿಬ್ಬಂದಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ | Oneindia Kannada

English summary
328 new coronavirus cases were reported in Karnataka on Monday. 350 people were discharged from hospitals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X