ರಾಜ್ಯದಲ್ಲಿ ಕೊರೊನಾ; 3310 ಹೊಸ ಪ್ರಕರಣಗಳು ದಾಖಲು

ಬೆಂಗಳೂರು, ಜೂನ್ 25: ರಾಜ್ಯದಲ್ಲಿ ಶುಕ್ರವಾರ ಒಟ್ಟು 3,310 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲಿ 114 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೂ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 34,539ಕ್ಕೆ ಏರಿಕೆಯಾಗಿದೆ. 6,524 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಶುಕ್ರವಾರದ ಅಂಕಿ ಸಂಖ್ಯೆ ಪ್ರಕಾರ, ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 28,26,754 ಆಗಿದೆ. ಇಲ್ಲಿಯವರೆಗೆ 26,84,597 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 107195 ಸಕ್ರಿಯ ಕೊರೊನಾ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

3310 New Coronavirus Cases Reported in Karnataka On June 25

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ: ರಾಜ್ಯದಲ್ಲಿ ಒಟ್ಟು 3,310 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಬಾಗಲಕೋಟೆ 8, ಬಳ್ಳಾರಿ 29, ಬೆಳಗಾವಿ 87, ಬೆಂಗಳೂರು ಗ್ರಾಮಾಂತರ 80, ಬೆಂಗಳೂರು 614, ಬೀದರ್ 6, ಚಾಮರಾಜನಗರ 71, ಚಿಕ್ಕಬಳ್ಳಾಪುರ 47, ಚಿಕ್ಕಮಗಳೂರು 39, ಚಿತ್ರದುರ್ಗ 13, ದಕ್ಷಿಣ ಕನ್ನಡ 377, ದಾವಣಗೆರೆ 89, ಧಾರವಾಡ 34, ಗದಗ 23, ಹಾಸನ 399, ಹಾವೇರಿ 29, ಕಲಬುರಗಿ 14, ಕೊಡಗು 183, ಕೋಲಾರ 140, ಕೊಪ್ಪಳ 21, ಮಂಡ್ಯ 119, ಮೈಸೂರು 367, ರಾಯಚೂರು 14, ರಾಮನಗರ 11, ಶಿವಮೊಗ್ಗ 212, ತುಮಕೂರು 80, ಉಡುಪಿ 92, ಉತ್ತರ ಕನ್ನಡ 99, ವಿಜಯಪುರ 8, ಯಾದಗಿರಿ 5 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

Recommended Video

      Sputnik V ಲಸಿಕೆ ನಮ್ಮ Covishieldಗಿಂತಲೂ ಸುರಕ್ಷಿತವೇ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+