ಕರ್ನಾಟಕದಲ್ಲಿ ಹೊಸದಾಗಿ 334 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು,ಫೆಬ್ರವರಿ 24: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು ಬುಧವಾರ 334 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,49,183ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 174 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,04,357ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,309ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

334 New Coronavirus Cases Reported In Karnataka On February 24

ರಾಜ್ಯದಲ್ಲಿ ಇಂದು 313 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,30,778ಕ್ಕೆ ಏರಿಕೆಯಾಗಿದೆ. ಇನ್ನು 6077 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 122 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Recommended Video

      ಮಾರ್ಚ್ 1ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ | Vaccination | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+