• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ 8 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಕೇಸ್ ಪತ್ತೆಯಾಗಿಲ್ಲ!

|

ಬೆಂಗಳೂರು, ಮಾರ್ಚ್.01: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ 349 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಒಂದು ದಿನದಲ್ಲಿ 324 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 5 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೂ 933421 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಭೀತಿ: ಅಯ್ಯೋ.. ಭಾರತದಲ್ಲಿ ಹೀಗ್ಯಾಕಾಯ್ತು ಪರಿಸ್ಥಿತಿ!?

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು 956100 ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೂ 12336 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 5824 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ 349 ಮಂದಿಗೆ ಕೊರೊನಾ ಪಾಸಿಟಿವ್:

ರಾಜ್ಯದಲ್ಲಿ ಒಟ್ಟು 349 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 8, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು 210, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 2, ಚಿತ್ರದುರ್ಗ 8, ದಕ್ಷಿಣ ಕನ್ನಡ 8, ದಾವಣಗೆರೆ 2, ಧಾರವಾಡ 11, ಗದಗ 3, ಹಾಸನ 1, ಹಾವೇರಿ 0, ಕಲಬುರಗಿ 14, ಕೊಡಗು 4, ಕೋಲಾರ 0, ಕೊಪ್ಪಳ 0, ಮಂಡ್ಯ 2, ಮೈಸೂರು 14, ರಾಯಚೂರು 0, ರಾಮನಗರ 0, ಶಿವಮೊಗ್ಗ 2, ತುಮಕೂರು 28, ಉಡುಪಿ 4, ಉತ್ತರ ಕನ್ನಡ 8, ವಿಜಯಪುರ 12, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

English summary
349 New Coronavirus Cases Reported in Karnataka Today, State Tally Rise to 956100.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X