ಕರ್ನಾಟಕ; 35024 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಏಪ್ರಿಲ್ 29; ಕರ್ನಾಟಕದಲ್ಲಿ 24 ಗಂಟೆಯಲ್ಲಿ 35024 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 270 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಹೇಳಿದೆ.

Recommended Video

      #Covid19Update: ದೇಶದಲ್ಲಿ ಒಂದೇ ದಿನ 2,97,540 ಮಂದಿ ಕೊರೊನಾ ಸೋಂಕಿನಿಂದ ಗುಣಮುಖ | Oneindia Kannada

      ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 14,74,846ಕ್ಕೆ ಏರಿಕೆಯಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,49,496 ಆಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 270 ಜನರ ಮೃತಪಟ್ಟಿದ್ದು, ಐಸಿಯುನಲ್ಲಿ 2431 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

      ಹೆಲ್ತ್ ಬುಲೆಟಿನ್ ಪ್ರಕಾರ 24 ಗಂಟೆಯಲ್ಲಿ 14,142 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಗುಣಮುಖಗೊಂಡವರ ಸಂಖ್ಯೆ 1110025 ಆಗಿದೆ.

      35024 New COVID 19 Cases Reported In Karnataka

      24 ಗಂಟೆಯಲ್ಲಿ 15118 ಆಂಟಿಜೆನ್, 160698 ಆರ್‌ಟಿಪಿಸಿಆರ್ ಸೇರಿದಂತೆ ಒಟ್ಟು 175816 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಇದುವರೆಗೂ 25407198 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ.

      ಯಾವ ಜಿಲ್ಲೆಯಲ್ಲಿ ಎಷ್ಟು?; ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಯಲ್ಲಿ 19,637 ಹೊಸ ಪ್ರಕರಣಗಳು ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 729984. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,37,518. 24 ಗಂಟೆಯಲ್ಲಿ 143 ಜನರು ಮೃತಪಟ್ಟಿದ್ದಾರೆ.

      ಬೆಂಗಳೂರು ಗ್ರಾಮಾಂತರ 1129. ದಕ್ಷಿಣ ಕನ್ನಡ 1175. ಮೈಸೂರು 1219. ತುಮಕೂರು 1195 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

      ಬಳ್ಳಾರಿ 896. ಹಾಸನ 624. ಧಾರವಾಡ 427. ಕಲಬುರಗಿ 957. ಕೊಡಗು 537. ಕೋಲಾರ 536. ಮಂಡ್ಯ 939. ರಾಯಚೂರು 628. ಶಿವಮೊಗ್ಗ 372. ವಿಜಯಪುರ 408 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

      ರಾಮನಗರ 183. ಕೊಪ್ಪಳ 220, ಹಾವೇರಿ 111. ಗದಗ 132. ಚಿತ್ರದುರ್ಗ 126. ಉತ್ತರ ಕನ್ನಡ 377. ಯಾದಗಿರಿ 259 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+