ಕರ್ನಾಟಕ; 3,589 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಅಕ್ಟೋಬರ್ 30: ಕರ್ನಾಟಕದಲ್ಲಿ 3,589 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 820398ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳು 59,499. ಶುಕ್ರವಾರ ರಾಜ್ಯದಲ್ಲಿ 49 ಜನರ ಸಾವನ್ನಪ್ಪಿದ್ದು, ಒಟ್ಟು 8,521 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ.

3589 New COVID 19 Cases In State On October 30

ಕರ್ನಾಟಕದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 11,140. ಒಟ್ಟು ಗುಣಮುಖಗೊಂಡವರ ಸಂಖ್ಯೆ 7,49,740 ಮತ್ತು 935 ಜನರು ಐಸಿಯುನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಶುಕ್ರವಾರ ರಾಜ್ಯದಲ್ಲಿ 23,912 ಆಂಟಿಜೆನ್ ಪರೀಕ್ಷೆಗಳನ್ನು ಮಾಡಲಾಗಿದೆ. 79,369 ಆರ್‌ಟಿಪಿಸಿಆರ್ ಪರೀಕ್ಷೆ ಮಾಡಲಾಗಿದೆ. ಒಟ್ಟು 103281 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 78,04,312 ಮಾದರಿ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು? : ಶುಕ್ರವಾರ ಬೆಂಗಳೂರು ನಗರದಲ್ಲಿ 1811 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 3,34,848ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 37,534.

ಚಿಕ್ಕಬಳ್ಳಾಪುರ 143, ಚಿತ್ರದುರ್ಗ 122, ದಕ್ಷಿಣ ಕನ್ನಡ 137, ಹಾಸನ 116, ಮಂಡ್ಯ 125, ಮೈಸೂರು 118, ತುಮಕೂರು 132, ವಿಜಯಪುರ 75 ಹೊಸ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+