ಸಖತ್ ಸುದ್ದಿ: ಕರ್ನಾಟಕದಲ್ಲಿ ಕಡಿಮೆ ಆಯ್ತಾ ಕೊರೊನಾವೈರಸ್?

ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 2.18ರಷ್ಟಿದ್ದು, ಸಾವಿನ ಪ್ರಮಾಣ ಶೇ.2.46ರಷ್ಟಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 89 ಮಂದಿ ಕೊವಿಡ್-19 ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಈವರೆಗೂ 34,743 ಮಂದಿ ಮಹಾಮಾರಿಯಿಂದ ಮೃತಪಟ್ಟಿದ್ದಾರೆ. ಒಂದು ದಿನದಲ್ಲಿ 3604 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 7699 ಸೋಂಕಿತರು ಗುಣಮುಖರಾಗಿದ್ದಾರೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,34,630ಕ್ಕೆ ಏರಿಕೆಯಾಗಿದೆ. ಈವರೆಗೂ26,98,822 ಸೋಂಕಿತರು ಗುಣಮುಖರಾಗಿದ್ದು. 1,01,042 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

3604 New Coronavirus Cases Reported in Karnataka Today, State Tally Rise to 2834630

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 800ಕ್ಕಿಂತ ಕಡಿಮೆಯಾಗಿದೆ. ಕಳೆದ ಒಂದು ದಿನದಲ್ಲಿ 788 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,11,430ಕ್ಕೆ ಏರಿಕೆಯಾಗಿದೆ. 11 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,581ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 39,070 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,25,566 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,64,636 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 61,19,393 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 2,77,18,635 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,38,38,028 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 3604 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 7, ಬಳ್ಳಾರಿ 26, ಬೆಳಗಾವಿ 143, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು 788, ಬೀದರ್ 8, ಚಾಮರಾಜನಗರ 54, ಚಿಕ್ಕಬಳ್ಳಾಪುರ 40, ಚಿಕ್ಕಮಗಳೂರು 126, ಚಿತ್ರದುರ್ಗ 22, ದಕ್ಷಿಣ ಕನ್ನಡ 454, ದಾವಣಗೆರೆ 118, ಧಾರವಾಡ 46, ಗದಗ 18, ಹಾಸನ 322, ಹಾವೇರಿ 13, ಕಲಬುರಗಿ 36, ಕೊಡಗು 115, ಕೋಲಾರ 101, ಕೊಪ್ಪಳ 9, ಮಂಡ್ಯ 109, ಮೈಸೂರು 478, ರಾಯಚೂರು 19, ರಾಮನಗರ 15, ಶಿವಮೊಗ್ಗ 177, ತುಮಕೂರು 116, ಉಡುಪಿ 97, ಉತ್ತರ ಕನ್ನಡ 57, ವಿಜಯಪುರ 9, ಯಾದಗಿರಿ 4 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    ಮಕ್ಕಳಿಗೆ Vaccination ಎಷ್ಟು ಮುಖ್ಯ ಗೊತ್ತಾ | Oneindia Kannada
    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ರಾಜ್ಯದಲ್ಲಿ ಮೇ 1ರಿಂದ ಈವರೆಗೂ 58,26,150 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ಮೊದಲ ಡೋಸ್ ನೀಡಲಾಗಿದ್ದು, 74,625 ಜನರಿಗೆ 2ನೇ ಡೋಸ್ ಲಸಿಕೆ ವಿತರಿಸಲಾಗಿದೆ. ರಾಜ್ಯದಲ್ಲಿ ಈವರೆಗೂ 7,49,217 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,98,336 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 8,19,659 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,48,130 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,07,79,466 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 27,30,180 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+