ಕರ್ನಾಟಕದಲ್ಲಿ ಕೊರೊನಾವೈರಸ್ ಉಳ್ಳವರ ಒಟ್ಟು ಸಂಖ್ಯೆ 50592

ಬೆಂಗಳೂರು, ನವೆಂಬರ್.01: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಕೊಂಚ ಕಡಿಮೆಯಾಗಿದೆ. ಒಂದು ದಿನದಲ್ಲಿ 3652 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲೇ 24 ಜನರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11192ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಕೊರೊನಾವೈರಸ್ ಒಟ್ಟು 827064 ಸೋಂಕಿತ ಪ್ರಕರಣಗಳ ಪೈಕಿ 765261 ಸೋಂಕಿತರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲೇ 8053 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 50592 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

3652 New Coronavirus Cases Reported in Karnataka Today, State Tally Rise to 827064

ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?:

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 20395 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 86378 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 106773 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 80,12,641 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲೆವಾರು ಕೊವಿಡ್-19 ಕೇಸ್?:
ರಾಜ್ಯದಲ್ಲಿ ಒಟ್ಟು 3652 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 20, ಬಳ್ಳಾರಿ 63, ಬೆಳಗಾವಿ 41, ಬೆಂಗಳೂರು ಗ್ರಾಮಾಂತರ 80, ಬೆಂಗಳೂರು 2167, ಬೀದರ್ 5, ಚಾಮರಾಜನಗರ 25, ಚಿಕ್ಕಬಳ್ಳಾಪುರ 20, ಚಿಕ್ಕಮಗಳೂರು 43, ಚಿತ್ರದುರ್ಗ 65, ದಕ್ಷಿಣ ಕನ್ನಡ 99, ದಾವಣಗೆರೆ 47, ಧಾರವಾಡ 40, ಗದಗ 18, ಹಾಸನ 144, ಹಾವೇರಿ 20, ಕಲಬುರಗಿ 44, ಕೊಡಗು 33, ಕೋಲಾರ 60, ಕೊಪ್ಪಳ 27, ಮಂಡ್ಯ 46, ಮೈಸೂರು 147, ರಾಯಚೂರು 12, ರಾಮನಗರ 12, ಶಿವಮೊಗ್ಗ 73, ತುಮಕೂರು 104, ಉಡುಪಿ 47, ಉತ್ತರ ಕನ್ನಡ 52, ವಿಜಯಪುರ 87, ಯಾದಗಿರಿ 11, ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+