ಕರ್ನಾಟಕದಲ್ಲಿ ಆಟ ನಿಲ್ಲಿಸಿತಾ ಕೊರೊನಾವೈರಸ್: ಇಲ್ಲಿದೆ ಅಂಕಿ-ಅಂಶ!

ಬೆಂಗಳೂರು, ಅಕ್ಟೋಬರ್.27: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣದಲ್ಲಿ ಭಾರಿ ಇಳಿಕೆಯಾಗಿದೆ. ಪ್ರತಿನಿತ್ಯ ಕನಿಷ್ಠ 5 ಸಾವಿರದ ಗಡಿ ದಾಟುತ್ತಿದ್ದ ಪ್ರಕರಣಗಳ ಸಂಖ್ಯೆ ಮಂಗಳವಾರ 3691ಕ್ಕೆ ಸೀಮಿತಗೊಂಡಿದೆ.

ಕಳೆದ 24 ಗಂಟೆಗಳಲ್ಲಿ 3691 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 809638ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಒಂದೇ ದಿನ ಮಹಾಮಾರಿ ಕೊರೊನಾವೈರಸ್ ಸೋಂಕಿಗೆ 44 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 10991ಕ್ಕೆ ಏರಿಕೆಯಾಗಿದೆ. ಕೊರೊನಾವೈರಸ್ ಒಟ್ಟು 809638 ಸೋಂಕಿತ ಪ್ರಕರಣಗಳ ಪೈಕಿ 727298 ಸೋಂಕಿತರು ಗುಣಮುಖರಾಗಿದ್ದಾರೆ. 71330 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 7740 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

3691 New Coronavirus Cases Reported in Karnataka Today, State Tally Rise to 809638

ಎಷ್ಟು ಮಂದಿಗೆ ಕೊರೊನಾವೈರಸ್ ಪರೀಕ್ಷೆ?:

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 14385 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 52316 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 66701 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 75,14,194 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲೆವಾರು ಕೊವಿಡ್-19 ಕೇಸ್?:

ರಾಜ್ಯದಲ್ಲಿ ಒಟ್ಟು 3691 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 34, ಬಳ್ಳಾರಿ 64, ಬೆಳಗಾವಿ 50, ಬೆಂಗಳೂರು ಗ್ರಾಮಾಂತರ 93, ಬೆಂಗಳೂರು 1874, ಬೀದರ್ 13, ಚಾಮರಾಜನಗರ 34, ಚಿಕ್ಕಬಳ್ಳಾಪುರ 73, ಚಿಕ್ಕಮಗಳೂರು 57, ಚಿತ್ರದುರ್ಗ 70, ದಕ್ಷಿಣ ಕನ್ನಡ 122, ದಾವಣಗೆರೆ 36, ಧಾರವಾಡ 45, ಗದಗ 15, ಹಾಸನ 114, ಹಾವೇರಿ 19, ಕಲಬುರಗಿ 31, ಕೊಡಗು 43, ಕೋಲಾರ 16, ಕೊಪ್ಪಳ 22, ಮಂಡ್ಯ 123, ಮೈಸೂರು 188, ರಾಯಚೂರು 22, ರಾಮನಗರ 27, ಶಿವಮೊಗ್ಗ 103, ತುಮಕೂರು 92, ಉಡುಪಿ 86, ಉತ್ತರ ಕನ್ನಡ 78, ವಿಜಯಪುರ 128, ಯಾದಗಿರಿ 19 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+