ಕರ್ನಾಟಕದಲ್ಲಿ ಕೊರೊನಾ ಇಳಿಕೆ; 3709 ಪ್ರಕರಣ ದಾಖಲು

ಬೆಂಗಳೂರು, ಜೂನ್ 22: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 3,709 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 803 ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 139 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೂ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 34,164 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 8,111 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮಂಗಳವಾರದ ಅಂಕಿ ಸಂಖ್ಯೆ ಪ್ರಕಾರ, ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 28,15,029 ಆಗಿದೆ. ಇಲ್ಲಿಯವರೆಗೆ ಒಟ್ಟು 26,62,250 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 118592 ಸಕ್ರಿಯ ಕೊರೊನಾ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

3709 New Corona Cases Reported On June 22

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ: ರಾಜ್ಯದಲ್ಲಿ ಒಟ್ಟು 3,709 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಬಾಗಲಕೋಟೆ 7, ಬಳ್ಳಾರಿ 44, ಬೆಳಗಾವಿ 134, ಬೆಂಗಳೂರು ಗ್ರಾಮಾಂತರ 103, ಬೆಂಗಳೂರು 803, ಬೀದರ್ 6, ಚಾಮರಾಜನಗರ 52, ಚಿಕ್ಕಬಳ್ಳಾಪುರ 38, ಚಿಕ್ಕಮಗಳೂರು 163, ಚಿತ್ರದುರ್ಗ 77, ದಕ್ಷಿಣ ಕನ್ನಡ 374, ದಾವಣಗೆರೆ 90, ಧಾರವಾಡ 30, ಗದಗ 21, ಹಾಸನ 309, ಹಾವೇರಿ 13, ಕಲಬುರಗಿ 14, ಕೊಡಗು 161, ಕೋಲಾರ 65, ಕೊಪ್ಪಳ 25, ಮಂಡ್ಯ 124, ಮೈಸೂರು 486, ರಾಯಚೂರು 15, ರಾಮನಗರ 20, ಶಿವಮೊಗ್ಗ 169, ತುಮಕೂರು 144, ಉಡುಪಿ 81, ಉತ್ತರ ಕನ್ನಡ 114, ವಿಜಯಪುರ 16, ಯಾದಗಿರಿ 11 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      Americaದಿಂದ ಭಾರತಕ್ಕೆ ಬಂದ ಲಸಿಕೆ ಎಷ್ಟು ಗೋತ್ತಾ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+