ಕರ್ನಾಟಕದಲ್ಲಿ ಹೊಸದಾಗಿ 375 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು,ಜನವರಿ 25: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದು, ಸೋಮವಾರ 375 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,36,426ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 1036 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,17,361ಕ್ಕೆ ಏರಿಕೆಯಾಗಿದೆ. ಇನ್ನು 6,846 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 152 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,200ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

375 New COVID Cases Reported in Karnataka On January 25

ಬೆಂಗಳೂರಿನಲ್ಲಿ ಇಂದು 200 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 397333ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+