ಕರ್ನಾಟಕದಲ್ಲಿ 378 ಹೊಸ ಕೋವಿಡ್ ಪ್ರಕರಣ ದಾಖಲು
ಬೆಂಗಳೂರು, ಫೆಬ್ರವರಿ 17; ಕರ್ನಾಟಕದಲ್ಲಿ ಬುಧವಾರ 378 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 9,46,454ಕ್ಕೆ ಏರಿಕೆಯಾಗಿದೆ. ದೇಶದ ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಇಂದು 537 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 9,28,461.

ರಾಜ್ಯದಲ್ಲಿ ಇಂದು 3 ಜನರು ಮೃತಪಟ್ಟಿದ್ದಾರೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 12,276. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5,698 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಗಳ ವಿವರ; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಯೂ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ 253 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 402771ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 3982.
ಬಾಗಲಕೋಟೆ, ಹಾಸನ, ಹಾವೇರಿಯಲ್ಲಿ ಬುಧವಾರ ಹೊಸ ಪ್ರಕರಣ ದಾಖಲಾಗಿಲ್ಲ. ಗದಗ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ ಮತ್ತು ಬೀದರ್‌ನಲ್ಲಿ 1 ಹೊಸ ಪ್ರಕರಣಗಳು ದಾಖಲಾಗಿವೆ.
ದಕ್ಷಿಣ ಕನ್ನಡ 25, ಮೈಸೂರು 17, ಕಲಬುರಗಿ 10, ದಾವಣಗೆರೆ 5, ಧಾರವಾಡ 5, ಮಂಡ್ಯ 3, ತುಮಕೂರು 6, ಉಡುಪಿ 5 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 5 ಹೊಸ ಪ್ರಕರಣ ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications