ಕರ್ನಾಟಕದಲ್ಲಿ ಹೊಸದಾಗಿ 383 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು,ಫೆಬ್ರವರಿ 23: ಕರ್ನಾಟಕದಲ್ಲಿ ಹೊಸದಾಗಿ 383 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಂಗಳವಾರ 383 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,48,849ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಹೊಸದಾಗಿ 317 ಕೊರೊನಾ ಸೋಂಕಿತರು ಪತ್ತೆ
ರಾಜ್ಯದಲ್ಲಿ ಇಂದು 378 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,30,465ಕ್ಕೆ ಏರಿಕೆಯಾಗಿದೆ. ಇನ್ನು 6062 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 122 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,303ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 240 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,04,183ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.