ಕರ್ನಾಟಕ: 24 ಗಂಟೆಗಳಲ್ಲಿ 386 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಫೆಬ್ರವರಿ.19: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಗಳ ಸಂಖ್ಯೆ 400ಕ್ಕಿಂತ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 386 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 947246ಕ್ಕೆ ಏರಿಕೆಯಾಗಿದೆ.

ಒಂದು ದಿನದಲ್ಲಿ 291 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 5 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೂ 929058 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, 12287 ಮಂದಿ ಕೊರೊನಾವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 5882 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

386 New Coronavirus Cases Reported in Karnataka Today, State Tally Rise to 947246


ಕರ್ನಾಟಕದಲ್ಲಿ 386 ಮಂದಿಗೆ ಕೊರೊನಾ ಪಾಸಿಟಿವ್:

ರಾಜ್ಯದಲ್ಲಿ ಒಟ್ಟು 386 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 6, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು 209, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 20, ದಾವಣಗೆರೆ 5, ಧಾರವಾಡ 2, ಗದಗ 1, ಹಾಸನ 7, ಹಾವೇರಿ 1, ಕಲಬುರಗಿ 23, ಕೊಡಗು 2, ಕೋಲಾರ 6, ಕೊಪ್ಪಳ 0, ಮಂಡ್ಯ 4, ಮೈಸೂರು 34, ರಾಯಚೂರು 1, ರಾಮನಗರ 0, ಶಿವಮೊಗ್ಗ 6, ತುಮಕೂರು 11, ಉಡುಪಿ 4, ಉತ್ತರ ಕನ್ನಡ 3, ವಿಜಯಪುರ 9, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+