ಕರ್ನಾಟಕದಲ್ಲಿ 400ಕ್ಕಿಂತಲೂ ಕಡಿಮೆ ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು,ಫೆಬ್ರವರಿ 01: ಕರ್ನಾಟಕದಲ್ಲಿ 400ಕ್ಕಿಂತಲೂ ಕಡಿಮೆ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 388 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,39,775ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 470 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,21,592ಕ್ಕೆ ಏರಿಕೆಯಾಗಿದೆ. ಇನ್ನು 5944 ಸಕ್ರಿಯಯ ಪ್ರಕರಣಗಳಿದ್ದು, ಈ ಪೈಕಿ 145 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

388 New COVID Cases Reported in Karnataka On February 1

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,220ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 201 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,99,087ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Recommended Video

      Budget 2021 : ಮೋದಿ ಸರ್ಕಾರ ಕೊಟ್ಟ ದೊಡ್ಡ ಶಾಕ್ ಇದೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+