ಕರ್ನಾಟಕ; 39047 ಹೊಸ ಕೋವಿಡ್ ಪ್ರಕರಣ ಪತ್ತೆ
ಬೆಂಗಳೂರು, ಏಪ್ರಿಲ್ 28; ಕರ್ನಾಟಕದಲ್ಲಿ 24 ಗಂಟೆಯಲ್ಲಿ 39047 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 14,39,822ಕ್ಕೆ ಏರಿಕೆಯಾಗಿದೆ.
Recommended Video
ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ 24 ಗಂಟೆಯಲ್ಲಿ 229 ಜನರು ಮೃತಪಟ್ಟಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 15036. ಸಕ್ರಿಯ ಪ್ರಕರಣಗಳ ಸಂಖ್ಯೆ 3,28,884.
24 ಗಂಟೆಯಲ್ಲಿ ಆಸ್ಪತ್ರೆಯಿಂದ 11,833 ಜನರು ಡಿಸ್ವಾರ್ಜ್ ಆಗಿದ್ದಾರೆ. ಒಟ್ಟು ಡಿಸ್ಚಾರ್ಜ್ ಆದವರು 1095883. ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ 2,192 ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

17,226 ಆಂಟಿಜೆನ್ ಮತ್ತು 154771 ಆರ್‌ಟಿಪಿಸಿಆರ್ ಸೇರಿ ಒಟ್ಟು 171997 ಮಾದರಿಗಳ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು?: ಬೆಂಗಳೂರು ನಗರದಲ್ಲಿ 22,596 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 710347ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 224152.
ಬಳ್ಳಾರಿ 1106, ಹಾಸನ 1001, ಮೈಸೂರು 1759, ತುಮಕೂರು 1174, ಕೋಲಾರ 1194, ಮಂಡ್ಯ 935 ಹೊಸ ಪ್ರಕರಣ ಪತ್ತೆಯಾಗಿದೆ.
ಬೆಳಗಾವಿ 360, ಬಾಗಲಕೋಟೆ 333, ಚಾಮರಾಜನಗರ 424, ಬೀದರ್ 269, ಚಿಕ್ಕಬಳ್ಳಾಪುರ 683, ದಕ್ಷಿಣ ಕನ್ನಡ 664, ಧಾರವಾಡ 654, ಕಲಬುರಗಿ 901 ಪ್ರಕರಣ ದಾಖಲಾಗಿದೆ.












Click it and Unblock the Notifications