ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಪತ್ತೆಯಾದ ಕೊರೊನಾ ಅಂಕಿ ಸಂಖ್ಯೆ
ಬೆಂಗಳೂರು, ಜೂನ್ 24: ರಾಜ್ಯದಲ್ಲಿ ಗುರುವಾರ 3,979 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 969 ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ 138 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೂ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 34,425ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ ಹೆಚ್ಚಿದ್ದು, 9,768 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಗುರುವಾರದ ಅಂಕಿ ಸಂಖ್ಯೆ ಪ್ರಕಾರ, ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 28,23,444 ಆಗಿದೆ. ಇಲ್ಲಿಯವರೆಗೆ 26,78,473 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 110523 ಸಕ್ರಿಯ ಕೊರೊನಾ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ: ರಾಜ್ಯದಲ್ಲಿ ಒಟ್ಟು 3,979 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಬಾಗಲಕೋಟೆ 7, ಬಳ್ಳಾರಿ 67, ಬೆಳಗಾವಿ 98, ಬೆಂಗಳೂರು ಗ್ರಾಮಾಂತರ 81, ಬೆಂಗಳೂರು 969, ಬೀದರ್ 18, ಚಾಮರಾಜನಗರ 64, ಚಿಕ್ಕಬಳ್ಳಾಪುರ 44, ಚಿಕ್ಕಮಗಳೂರು 110, ಚಿತ್ರದುರ್ಗ 33, ದಕ್ಷಿಣ ಕನ್ನಡ 498, ದಾವಣಗೆರೆ 118, ಧಾರವಾಡ 62, ಗದಗ 18, ಹಾಸನ 336, ಹಾವೇರಿ 28, ಕಲಬುರಗಿ 31, ಕೊಡಗು 115, ಕೋಲಾರ 103, ಕೊಪ್ಪಳ 18, ಮಂಡ್ಯ 137, ಮೈಸೂರು 404, ರಾಯಚೂರು 16, ರಾಮನಗರ 32, ಶಿವಮೊಗ್ಗ 206, ತುಮಕೂರು 128, ಉಡುಪಿ 123, ಉತ್ತರ ಕನ್ನಡ 104, ವಿಜಯಪುರ 4, ಯಾದಗಿರಿ 7 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications