ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಟಿ ದಾಳಿ : ಡಿಕೆಶಿ ಮನೆಯಲ್ಲಿ ಇನ್ನು ಮುಗಿದಿಲ್ಲ ದಾಖಲೆಗಳ ಪರಿಶೀಲನೆ

|
Google Oneindia Kannada News

ಬೆಂಗಳೂರು, ಆ.4 : ಮೂರನೇ ದಿನವೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ದಿನವೂ ಮೈಸೂರು ಮತ್ತು ಹಾಸನದಲ್ಲಿ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ.

ಗ್ಯಾಲರಿ: ಡಿಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ

ಬುಧವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರ ಸದಾಶಿವ ನಗರ ನಿವಾಸ ಸೇರಿದಂತೆ 40 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದರು. ಎರಡು ದಿನಗಳಿಂದ ಅಧಿಕಾರಿಗಳು ಸದಾಶಿವ ನಗರದ ನಿವಾಸದಲ್ಲಿಯೇ ವಾಸ್ತವ್ಯ ಹೂಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

3rd day income tax raid at minister DK Shivakumar house

ಡಿ.ಕೆ.ಶಿವಕುಮಾರ್ ಆಪ್ತ ಜ್ಯೋತಿಷಿ ದ್ವಾರಕಾನಾಥ್ ಮನೆಯಲ್ಲಿನ ಪರಿಶೀಲನೆ ಕಾರ್ಯ ಗುರುವಾರ ರಾತ್ರಿ ಮುಕ್ತಾಯಗೊಂಡಿದೆ. ಆದರೆ, ಮೈಸೂರಿನಲ್ಲಿರುವ ಡಿಕೆಶಿ ಮಾವನ ಮನೆ, ಸದಾಶಿವನಗರ ನಿವಾಸ, ಡಿಕೆಶಿ ಆಪ್ತ ಆಂಜನೇಯ ಅವರ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಡಿಕೆಶಿ ಮನೆಯಲ್ಲಿ ಮುಂದುವರಿದ ತನಿಖೆ: ದಿನದ 10 ಪ್ರಮುಖ ಬೆಳವಣಿಗೆಡಿಕೆಶಿ ಮನೆಯಲ್ಲಿ ಮುಂದುವರಿದ ತನಿಖೆ: ದಿನದ 10 ಪ್ರಮುಖ ಬೆಳವಣಿಗೆ

ಐವರು ಅಧಿಕಾರಿಗಳ ತಂಡ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದು, ಶುಕ್ರವಾರ ಬೆಳಗ್ಗೆ 5.30 ಅಧಿಕಾರಿಗಳು ಪರಿಶೀಲನೆ ಆರಂಭಿಸಿದ್ದಾರೆ. ಜ್ಯೋತಿಷಿ ದ್ವಾರಕಾನಾಥ್ ಅವರ ಮನೆಯಿಂದ ಹಲವು ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಡಿಕೆಶಿ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ದಾಖಲಾಯ್ತು ಹೊಸ ಕೇಸ್ಡಿಕೆಶಿ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ ದಾಖಲಾಯ್ತು ಹೊಸ ಕೇಸ್

ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಈಗಲ್ ಟನ್ ಗಾಲ್ಫ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಗುಜರಾತ್ ನ ಕಾಂಗ್ರೆಸ್ ಶಾಸಕರು ಅಲ್ಲಿ ವಾಸ್ತವ್ಯ ಹೂಡಿದ್ದಾರೆ. ಗುರುವಾರ ಶಾಸಕರು ಬೇರೆ ರೆಸಾರ್ಟ್ ಗೆ ಶಿಫ್ಟ್ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಗುರುವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

English summary
On Wednesday, August 2, 2017 morning the Income Tax department raided the residence of Karnataka power minister DK Shivakumar. Department continued their raids for the 3rd day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X